Karnataka NewsPolitics
Trending
BIGG NEWS : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಬಿಎಸ್ ವೈ-ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ!

ಬೆಂಗಳೂರು : ಇಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಇಂದು ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರಿ ನಿವಾಸದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿದ್ದು, ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಸದ್ಯ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬಿಎಸ್ ವೈ ಭೇಟಿ ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಈ ಭೇಟಿಯಲ್ಲಿ ಯಾವುದೇ ಕುತೂಹಲವಿಲ್ಲ. ಬೆಂಗಳೂರು ಬಂದಾಗ ಸಹಜವಾಗಿ ಭೇಟಿಯಾಗುತ್ತೇನೆ. ಯಡಿಯೂರಪ್ಪನವರು ಹಿರಿಯರು ಹಾಗೂ ಸಮಾಜದ ಮುಖಂಡರಾಗಿದ್ದಾರೆ. ಕೆಲವೊಂದು ವಿಚಾರದ ಬಗ್ಗೆ ಅವರೊಂದಿಗೆ ಚರ್ಚಿಸಿ ಮಾರ್ಗದರ್ಶನ ಪಡೆದುಕೊಂಡಿದ್ದೇನೆ.ಅವರ ಅರ್ಶಿವಾದ ಪಡೆಯುವ ನಿಟ್ಟಿನಲ್ಲಿ ಭೇಟಿಯಾಗಿದ್ದೇನೆ ಎಂದು ಹೇಳಿದರು.