ಬೋಟ್ ಮೂಲಕ ಸಂಚರಿಸಿ ಕೃಷ್ಣಾ ನೀರಿನ ಮಟ್ಟ ಅವಲೋಕಿಸಿದ ಜಿಲ್ಲಾಧಿಕಾರಿ

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಭಾರಿ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಎದುರಾದ ಸಂಭವನೀಯ ಪ್ರವಾಹವನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಬೋಟ್ ಮೂಲಕ ಸಂಚರಿಸಿ ನದಿ ನೀರಿನ ಮಟ್ಟವನ್ನು ಅವಲೋಕಿಸಿದರು.
ಮಹಾರಾಷ್ಟ್ರ ಕೊಂಕನ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 1.12 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ.
ಹೀಗೆ ದಿನದಿಂದ ದಿನಕ್ಕೆ ನೀರಿನ ಮಟ್ಟದಲ್ಲಿ ಹೆಚ್ಚಳವಾದರೇ ಪ್ರವಾಹ ಎದುರಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.
ಬುಧವಾರ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಎಸ್ ಪಿ ಡಾ.ಸಂಜೀವ ಪಾಟೀಲ. ಜಿಪಂ ಸಿಇಒ ದರ್ಶನ ಎಚ್.ವಿ ಅವರು ಪ್ರವಾಹ ಪೀಡಿತ ಗ್ರಾಮಗಳಿಗೆ ತೆರಳಿ ಕಾಳಜಿ ಕೇಂದ್ರ. ಬೋಟ್ ವ್ಯವಸ್ಥೆ ಇನ್ನಿತರರ ಸಿದ್ದತೆ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ, ಉಪ ತಹಶೀಲ್ದಾರ ಸಿ.ಎ.ಪಾಟೀಲ್ ಡಿವೈಎಸ್ ಪಿ ಬಸವರಾಜ ಯಲಿಗಾರ, ಎಸ್.ಬಿ.ಗಿರೀಶ್ ಮುಂತಾದವರು ಇದ್ದರು.