Karnataka News
ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ: ಕರ್ನಾಟಕ – ಗೋವಾ ರಾಜ್ಯ ಹೆದ್ದಾರಿ ಸಂಚಾರ ಕಡಿತ

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಭೀಮಗಡ ವನ್ಯಧಾಮದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ಸಿಂಧನೂರು- ಹೆಮ್ಮಡಗಾ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ಹರಿದಿದೆ. ಇದರಿಂದ ಕರ್ನಾಟಕ- ಗೋವಾ ನಡುವಿನ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.
ಅನಿವಾರ್ಯವಾಗಿ ಲೋಂಡಾ ಅಥವಾ ಚೂರ್ಲಾ ಮಾರ್ಗಗಳ ಮೂಲಕ ಗೋವಾ ಕಡೆಗೆ ಸಂಚಾರ ಬೆಳೆಸಬೇಕಾಕಿದೆ.
ಗುರುವಾರ ಬೆಳಿಗ್ಗೆಯಿಂದ ಅಲಾತ್ರ ಹಳ್ಳದ ಮೇಲೆ ನಾಲ್ಕು ಅಡಿಗಳಷ್ಟು ನೀರು ಹರಿಯುತ್ತಿದೆ. ಪರಿಣಾಮ ಈ ಹೆದ್ದಾರಿಯಲ್ಲಿ ಮಧ್ಯಾಹ್ನದ ವೇಳೆಗೆ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಕಾವಲು ನೀಡಲಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ.