ರಕ್ಕಸಕೊಪ್ಪ ಡ್ಯಾಮ್ ಭರ್ತಿಗೆ 5 ಫೂಟ್ ಮಾತ್ರ ಬಾಕಿ: ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಕೃಷ್ಣಾ, ಮಲಪ್ರಭಾ, ವೇದಗಂಗಾ, ದೂಧಗಂಗಾ, ಮಾರ್ಕಂಡೇಯ ನದಿಗಳಿಗೆ ಅಪಾರ ಪ್ರಮಾಣ ನೀರು ಹರಿದು ಬರುತ್ತಿದೆ. ಇನ್ನು ರಕ್ಕಸಕೊಪ್ಪ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಯಾವುದೇ ಕ್ಷಣದಲ್ಲಿ ಮಾರ್ಕಂಡೇಯ ನದಿಗೆ ನೀರನ್ನು ಬಿಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಕಸಕೊಪ್ಪ ಜಲಾಶಯದ ನೀರಿನ ಗರಿಷ್ಠ ಮಟ್ಟ 2475 ಫೂಟ್ ಇದೆ. ಈಗಾಗಲೇ ರಕ್ಕಸಕೊಪ್ಪ ಜಲಾಶಯದಲ್ಲಿ 2470 ಫೂಟ್ ನೀರು ಸಂಗ್ರಹವಾಗಿದೆ. ರಕ್ಕಸಕೊಪ್ಪ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿದೆ. ಹೀಗಾಗಿ ಯಾವುದೇ ಸಮಯದಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ. ಆದ ಕಾರಣ ನದಿಗೆ ಜಲಾಶಯದ ನೀರನ್ನು ಯಾವುದೇ ಕ್ಷಣದಲ್ಲಿ ಹೊರ ಬಿಡಲಾಗುವುದು. ಆದ್ದರಿಂದ ನದಿಯಲ್ಲಿ ಪ್ರವಾಹವು ಹೆಚ್ಚಾಗುವ ಸಾಧ್ಯತೆಯಿದ್ದು, ರಕ್ಕಸಕೊಪ್ಪ ಜಲಾಶಯದ ಕೆಳ ಪ್ರದೇಶದ ಮಾರ್ಕಂಡೇಯ ನದಿಯ ದಡದಲ್ಲಿರುವ ಜನರು ಎಚ್ಚರಿಕೆಯಿಂದ ಇರುವಂತೆ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.