EducationKarnataka News
ಖಾನಾಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತರುವ ಕಾರಣ, ಜುಲೈ 15ರಿಂದ ಶಾಲೆಗಳಿಗೆ ರಜೆ ಘೋಷಣೆ

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ಕೆಲವು ಕ್ಲಸ್ಟರ್ಗಳಲ್ಲಿ ಜುಲೈ 15ರಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತಾಲ್ಲೂಕಿನ ಗುಂಜಿ ಮತ್ತು ಜಾಂಬೋಟಿ ಹೋಬಳಿ ವ್ಯಾಪ್ತಿಯ 11 ಕ್ಲಸ್ಟರ್ಗಳ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಕ್ಷೇತ್ರಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಆದೇಶ ಹೊರಡಿಸಿದ್ದಾರೆ.
ಲೋಂಡಾ, ಗುಂಜಿ, ಶಿರೋಲಿ, ನೀಲಾವಡೆ, ಮೊಹೀಶೇತ, ನಾಗರಗಾಳಿ, ಹಲಗಾ, ಬಿಜಗರ್ಣಿ, ಜಾಂಬೋಟಿ, ಬೈಲೂರು, ಕಣಕುಂಬಿ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಶುಕ್ರವಾರದಿಂದ ಅನಿರ್ದಿಷ್ಟ ಅವಧಿಯವರೆಗೆ ಬಂದ್ ಇರುತ್ತವೆ.