Karnataka News
BREAKING NEWS : ಬೆಳಗಾವಿಯಲ್ಲಿ ಭಾರೀ ಮಳೆಗೆ ಮನೆಗೋಡೆ ಕುಸಿದು ಬಾಲಕ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಗೋಡೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ಅನಂತು ಧರ್ಮೇಂದ್ರ (15) ಜಾನುವಾರುಗಳಿಗೆ ಮೇವು ಹಾಕಲು ಹೋದಾಗ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.