Karnataka NewsPolitics
ಜುಲೈ 18ಕ್ಕೆ ನಡೆಯುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಆಗಮಿಸಲು ಬಿಜೆಪಿ ಶಾಸಕರಿಗೆ ಸೂಚನೆ

ಬೆಂಗಳೂರು: ಜುಲೈ 18ಕ್ಕೆ ನಡೆಯುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಿಗೆ ಜು.16(ಶನಿವಾರ) ಸಂಜೆಯೇ ಬೆಂಗಳೂರಿಗೆ ಆಗಮಿಸಲು ಸೂಚಿಸಲಾಗಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಎಲ್ಲ ಶಾಸಕರನ್ನು ಒಂದೆಡೆ ಸೇರಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
ಮತದಾನ ಪ್ರಕ್ರಿಯೆ ಕುರಿತು ಶಾಸಕರಿಗೆ ತರಬೇತಿ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು, ಅದೇ ಕಾರಣಕ್ಕೆ ಶನಿವಾರವೇ ಬೆಂಗಳೂರಿಗೆ ಆಗಮಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸತೀಶ್ ರೆಡ್ಡಿ ಸೂಚನೆ ನೀಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರಪತಿ ಚುನಾವಣೆಗೆ ಗೌಪ್ಯ ಮತದಾನಕ್ಕೆ ಅವಕಾಶ ಇರುವುದರಿಂದ ಅಧಿಕೃತ ವಿಪ್ ಜಾರಿ ಮಾಡಲು ಅವಕಾಶವಿಲ್ಲ ಎನ್ನಲಾಗಿದ್ದು, ಹೀಗಾಗಿ ಈ ಸಂದರ್ಭದಲ್ಲಿ ಬಿಜೆಪಿ ಶಾಸಕರ ಮತಗಳು ಅಸಿಂಧು ಆಗದಂತೆ ನೋಡಿಕೊಳ್ಳಲು ಬಿಜೆಪಿ ನಾಯಕರು ಈ ನಿರ್ಧಾರ ಮಾಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.