Crime NewsKarnataka News
ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ

ಬೆಳಗಾವಿ: ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಸವದತ್ತಿ ತಾಲೂಕಿನ ಹಿರೂರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತ ದುರ್ದೈವಿಗಳನ್ನು ಫಕೀರಪ್ಪ ಸಿದ್ದಪ್ಪ ಚಂದರಗಿ(54), ಮಹಾದೇವ ದುರ್ಗಪ್ಪ ಮೇತ್ರಿ(40) ಎಂದು ಗುರುತಿಸಲಾಗಿದೆ.
ಮೃತ ದುರ್ದೈವಿಗಳನ್ನು ಫಕೀರಪ್ಪ ಸಿದ್ದಪ್ಪ ಚಂದರಗಿ(54), ಮಹಾದೇವ ದುರ್ಗಪ್ಪ ಮೇತ್ರಿ(40) ಎಂದು ಗುರುತಿಸಲಾಗಿದೆ.
ಕಬ್ಬಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲಿಯೇ ಇಬ್ಬರು ರೈತರು ಮೃತಪಟ್ಟಿದ್ದಾರೆ
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೆಟ್ಟಿ ನೀಡಿದ ಸವದತ್ತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಇಬ್ಬರು ರೈತರು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.