Karnataka News
BIG NEWS: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ, ವಾಟ್ಸಪ್ ಮೆಸೇಜ್; ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು

ಮಂಡ್ಯ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಿಥಿ ಹೆಸರಲ್ಲಿ ನಕಲಿ ವಾಟ್ಸಪ್, ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು, ಮೆಸೇಜ್ ಗಳ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ.
ತುರ್ತಾಗಿ ಹಣ ಬೇಕು ಎಂದು ಹಲವರಿಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ.
ವಾಟ್ಸಪ್ ಹಾಗೂ ಫೇಸ್ ಬುಕ್ ನಕಲಿ ಖಾತೆ ಕ್ರಿಯೇಟ್ ಮಾಡಿ ಡಿಸಿ ಎಸ್.ಅಶ್ವತಿ ಅವರ ಫೋಟೋಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸೈಬರ್ ಕ್ರೈಂ ಗೆ ದೂರು ನೀಡಿದ್ದು, ತಮ್ಮ ಹೆಸರಲ್ಲಿ ಹಣ ನೀಡುವಂತೆ ಯಾರಿಗಾದರೂ ಸಂದೇಶ ಬಂದರೆ ಹಣ ನೀಡದಂತೆ ಮನವಿ ಮಾಡಿದ್ದಾರೆ.