Crime NewsKarnataka News
BREAKING NEWS : ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಪೊಲೀಸರಿಂದ ನಟೋರಿಯಸ್ ರೌಡಿಶೀಟರ್ ಮೇಲೆ ಫೈರಿಂಗ್!

ಮಂಗಳೂರು : ಮಂಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ.
15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಕ್ತಾರ್ಗೆ ಚಿಕಿತ್ಸೆ ನೀಡಲಾಗುತ್ತಿದೆ.
ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ. ಸದ್ಯ ಬಂಧಿಸಿದ್ದ ಪೊಲೀಸರು ಪ್ರಕರಣವೊಂದರ ಮಹಜರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದ.