Crime NewsKarnataka News
ಸೆಲ್ಫಿ ಹುಚ್ಚಾಟ, ನೀರಸಾಗರದಲ್ಲಿ ಕೊಚ್ಚಿ ಹೋದ ಯುವಕ

ಹುಬ್ಬಳ್ಳಿ – ರಾಜ್ಯಾದ್ಯಂತ ಮಳೆ ಅಬ್ಬರ (Heavy Rainfall) ಮುಂದುವರಿದಿದೆ. ನದಿಗಳು (Rivers) ಉಕ್ಕಿ ಹರಿಯುತ್ತಿದ್ದು, ಜಲಾಶಯಗಳು (Dams) ಭರ್ತಿಯಾಗಿವೆ. ಇನ್ನು ಜಲಪಾತ, ಹಳ್ಳ – ಕೊಳ್ಳಗಳಿಗೆ ಜೀವ ಕಳೆ ಬಂದಿದೆ. ಇದನ್ನು ಕಣ್ತುಂಬಿಕೊಳ್ಳಲೆಂದು ಹೋಗುತ್ತಿರೋ ಜನ ಸೆಲ್ಫಿ (Selfies) ಹುಚ್ಚಾಟ ನಡೆಸಿ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ.
ಇಂಥದ್ದೇ ಒಂದು ಘಟನೆ ಧಾರಾವಾಡ (Dharwad) ಜಿಲ್ಲೆಯಲ್ಲಿ ನಡೆದಿದ್ದು, ಯುವಕನೋರ್ವ ನೀರಸಾಗರದಲ್ಲಿ ಕೊಚ್ಚಿ ಹೋಗಿದ್ದಾನೆ. ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೋರ್ವ (Selfie Death) ನೀರು ಪಾಲಾದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ ನಡೆದಿದೆ.
ನೀರಿನಲ್ಲಿ ಕೊಚ್ಚಿ ಹೋದ ಯುವಕನನ್ನು 22 ವರ್ಷದ ಕಿರಣ್ ರಜಪೂತ ಎಂದು ಗುರುತಿಸಲಾಗಿದೆ. ಕಿರಣ್ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿಯಾಗಿದ್ದು, ಭಾನುವಾರ ಗೆಳೆಯರೊಡನೆ ಪ್ರವಾಸಕ್ಕೆಂದೂ ಹೋಗಿದ್ದನು.
ಈ ಸಮಯದಲ್ಲಿ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದ ಯುವಕ, ನೀರಿನ ರಭಸ ಹೆಚ್ಚಾಗಿದ್ದರಿಂದ ಕೊಚ್ಚಿ ಹೋಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಿರಣ್ ಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಕಿರಣ್ ರಜಪೂತ ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.