fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Feature articlesKarnataka NewsPolitics

ಮನೆಹಾನಿ- ಜಿಲ್ಲೆಯಲ್ಲಿ 924 ಕೋಟಿ ರೂಪಾಯಿ ಪರಿಹಾರ ವಿತರಣೆ: ಬೆಳೆ, ಮನೆಹಾನಿ ಸಮೀಕ್ಷೆ ನಡೆಸಿ ತಕ್ಷಣ ಪರಿಹಾರ ನೀಡಿ : ಸಚಿವ ಕಾರಜೋಳ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿ : ಇತ್ತೀಚಿನ ಮಳೆಯಿಂದ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ ಹಾಗೂ ಮನೆಹಾನಿಯನ್ನು ನಿಖರವಾಗಿ ಸಮೀಕ್ಷೆ ನಡೆಸಿ ತಕ್ಷಣವೇ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಚಿಕ್ಕೋಡಿಯಲ್ಲಿ ಸೋಮವಾರ (ಜು.18) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು‌ ಮಾತನಾಡಿದರು.

ಇತ್ತೀಚಿನ ಮಳೆಯಿಂದ 877 ಹೆಕ್ಟೇರ್ ಪ್ರದೇಶ ಜಲಾವೃತಹೊಂಡಿರುವುದರಿಂದ ನೀರು ಸರಿದ ಬಳಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು.

ಇದಲ್ಲದೇ ಹಾನಿಗೊಳಗಾಗಿರುವ ಒಟ್ಟಾರೆ 775 ಮನೆಗಳಿಗೂ ಕೂಡ ಮಾರ್ಗಸೂಚಿ ಪ್ರಕಾರ ತಕ್ಷಣವೇ ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಇದುವರೆಗೆ ಎಲ್ಲ ಜಲಾಶಯಗಳು ಸರಾಸರಿ ಶೇ.60 ರಷ್ಟು ಮಾತ್ರ ಭರ್ತಿಯಾಗಿರುತ್ತವೆ. ಆಲಮಟ್ಟಿ ಜಲಾಶಯದಿ‌ಂದ ಕೂಡ ಪರಿಸ್ಥಿತಿ ಆಧರಿಸಿ 1.25 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

ಸಂಭವನೀಯ ಪ್ರವಾಹ ಹಿನ್ನೆಲೆಯಲ್ಲಿ ರಚಿಸಲಾಗಿರುವ ತಂಡಗಳು ಹಾಗೂ ನೋಡಲ್ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು. ಯಾವುದೇ ಅಧಿಕಾರಿಗಳಿಗೂ ರಜೆ ನೀಡಬಾರದು ಎಂದು ತಿಳಿಸಿದರು.

ಮನೆಹಾನಿ- ಜಿಲ್ಲೆಯಲ್ಲಿ 924 ಕೋಟಿ ರೂಪಾಯಿ ಪರಿಹಾರ ವಿತರಣೆ:

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪ್ರವಾಹದಿಂದ ಹಾನಿಗೊಳಗಾದ 75,023 ಮನೆಗಳಿಗೆ ಇದುವರೆಗೆ ಒಟ್ಟಾರೆ 924 ಕೋಟಿ ರೂಪಾಯಿ ಪರಿಹಾರವನ್ನು ನೀಡಲಾಗಿರುತ್ತದೆ.

ಆದಾಗ್ಯೂ ಕೆಲವು ಮನೆಗಳಿಗೆ ಪರಿಹಾರ ದೊರೆತಿಲ್ಲ ಎಂದಾದರೆ ಅಂತಹ ಕುಟುಂಬಗಳಿಗೂ ಪರಿಹಾರ ನೀಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಸಮೀಕ್ಷೆ ನಡೆಸಬೇಕು ಎಂದರು.

ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 28 ಕೋಟಿ ಹಾಗೂ ಎಲ್ಲ ತಹಶೀಲ್ದಾರರ ಖಾತೆಯಲ್ಲಿ 30 ಕೋಟಿ ಸೇರಿದಂತೆ 58 ಕೋಟಿ ರೂಪಾಯಿ ಲಭ್ಯವಿದೆ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು ಯಾವುದೇ ತೊಂದರೆ ಇರುವುದಿಲ್ಲ ಎಂದು ಸಚಿವರು ತಿಳಿಸಿದರು.

ಮನೆಹಾನಿ ವಸ್ತುನಿಷ್ಠ ಸಮೀಕ್ಷೆಗೆ ಸೂಚನೆ:

ಮನೆಹಾನಿಯ ಸಮೀಕ್ಷೆಯನ್ನು ವಸ್ತುನಿಷ್ಠವಾಗಿ ಮಾಡಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ತಂಡವನ್ನು ರಚಿಸಬೇಕು. ಜನರಿಂದ ಯಾವುದೇ ದೂರುಗಳು ಬಾರದಂತೆ ನಿಖರವಾಗಿ ಸಮೀಕ್ಷೆ ನಡೆಸಬೇಕು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಮುಳುಗಡೆಯಾಗುವ ಸೇತುವೆಗಳನ್ನು ನೀರು ಹರಿವು ಪ್ರಮಾಣವನ್ನು ಆಧರಿಸಿ ಅವುಗಳನ್ನು ವಿಸ್ತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಬೆಳೆಹಾನಿ ಡ್ರೋಣ್ ಸಮೀಕ್ಷೆಗೆ ಸೂಚನೆ:

ಬೆಳೆಹಾನಿ ಕುರಿತು ಮೊದಲು ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ನೀರು ಸರಿದ ಬಳಿಕ ಕ್ಷೇತ್ರ ಭೇಟಿ ನೀಡಿ ನಿಯಮಾವಳಿ ಪ್ರಕಾರ ಹಾನಿ ಕುರಿತು ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸಚಿವ ಗೋವಿಂದ ಕಾರಜೋಳ ಅವರು ನಿರ್ದೇಶನ ನೀಡಿದರು.

ರಸ್ತೆಗಳು ಹಾಳಾಗಿದ್ದರೆ ಎನ್.ಆರ್.ಇ.ಜಿ. ಯೋಜನೆಯಡಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಾರಿ ಇದುವರೆಗೆ ಮಳೆಯಿಂದ ಹೆಚ್ಚಿನ ಪ್ರಮಾಣ ಆಗಿರುವುದಿಲ್ಲ. ಆದಾಗ್ಯೂ ಸಂಭವನೀಯ ಪರಿಸ್ಥಿತಿ ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸಿದ್ಧತೆ‌ ಮಾಡಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಡೀ ಜಿಲ್ಲಾಡಳಿತ ಸನ್ನದ್ಧವಾಗಿದೆ. ಕಾಳಜಿ ಕೇಂದ್ರ ಗುರುತಿಸುವಿಕೆ, ರಕ್ಷಣಾ ತ‌ಂಡಗಳ ನಿಯೋಜನೆ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಹೇಳಿದರು.

ಇತ್ತೀಚಿನ ಮಳೆಯಿಂದ ಜಿಲ್ಲೆಯಲ್ಲಿ ಒಟ್ಟಾರೆ 877 ಹೆಕ್ಟೇರ್ ಪ್ರದೇಶ ಜಲಾವೃತಗೊಂಡಿರುತ್ತದೆ. ಜಿಲ್ಲೆಯಲ್ಲಿ ಇದುವರೆಗೆ ಇಬ್ಬರು ಪ್ರಾಣವನ್ನು ಕಳೆದುಕೊಂಡಿರುತ್ತಾರೆ.

ಜಿಲ್ಲೆಯಾದ್ಯಂತ 3 ಮನೆಗಳು ಸಂಪೂರ್ಣವಾಗಿ ಕುಸಿದಿರುತ್ತವೆ. ಉಳಿದಂತೆ ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಭೆಯಲ್ಲಿ ಮಾಹಿತಿಯನ್ನು ನೀಡಿದರು.

ಕೆಳಹಂತದಲ್ಲಿರುವ ಐದು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಪ್ರಸ್ತಾವ ಐದು ವರ್ಷಗಳ ಹಿಂದೆಯೇ ಸಿದ್ದಪಡಿಸಲಾಗಿತ್ತು. ಆ ಸೇತುವೆಗಳನ್ನು ನಿರ್ಮಿಸಿದರೆ ಪ್ರತಿವರ್ಷ ಸೇತುವೆ ಮುಳುಗಡೆ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಸಚಿವರ ಗಮನಸೆಳೆದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: