ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವು: ವೈದ್ಯರ ನಿರ್ಲಕ್ಷವೇ ಕಾರಣ ಎಂದ ಪೋಷಕರು

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪ ಮಾಡಿ ಬಿಮ್ಸ್ ಆಸ್ಪತ್ರೆ ಮುಂಭಾಗದಲ್ಲಿ ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಮುಂದೆ ವೈದ್ಯರ ನಿರ್ಲಕ್ಷದಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹೊನ್ನಿಹಾಳ ಗ್ರಾಮದ ನಿವಾಸಿ ಸುನಿತಾ ಎಂಟು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆಯಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಕ್ಯಾರೇ ಎನ್ನದ ವೈದ್ಯರ ಸೀಜರಿನ್ ಮಾಡುವಂತೆ ಕಾಲು ಹಿಡಿದು ಕೇಳಿಕೊಂಡ್ರೂ ನಿರ್ಲಕ್ಷ್ಯ ಮಾಡಿದ ಪರಿಣಾಮ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಪೋಷಕರು, ಇಂದು ಹರಿಗೆ ಸಂದರ್ಭದಲ್ಲಿ ಮಗು ಸಾವು ಕುಟುಂಬಸ್ಥರ ಆಕ್ರೋಶ. ಹಾರ್ಟ್ ಬೀಟ್ ಕಡಿಮೆ ಆಗಿ ಮಗು ಮೃತಪಟ್ಟಿದೆ ಎಂದು ವೈದ್ಯರು ಕಾರಣ ನೀಡುತ್ತಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಅಂತಾ ಆಸ್ಪತ್ರೆ ಆವರಣದಲ್ಲಿ ಧರಣಿ ಕುಳಿತ ಕುಟುಂಬಸ್ಥರು. ಒಂಬತ್ತು ತಿಂಗಳು ಒಂಬತ್ತು ದಿನ ಆದ್ರೂ ಸೀಜರಿನ್ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ. ಸೀಜರಿನ್ ಮಾಡದೇ ನಿರ್ಲಕ್ಷ್ಯ ತೋರಿ ಇಂದು ಮಗು ಸಾಯಿಸಿದ್ದಾರೆ. ನಮಗೆ ಜೀವಂತ ಮಗು ಕೊಡಿ ಎಂದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನ ಮಾಡಿದರು.
ಇದೇ ವೇಳೆ ಮಾತನಾಡಿದ ಪೋಷಕರು, ನಾವು ಕಳೆದ 8 ದಿನಗಳಿಂದ ಆಸ್ಪತ್ರೆಯಲ್ಲಿದ್ದೇವೆ. ಇಂದು ನಾಳೆ ಎನ್ನುತ್ತಾ ನಮಗೆ 8 ದಿನ ಇಲ್ಲಯೇ ಕಳೆದಿದ್ದಾರೆ. ಇನ್ನು ನಾರ್ಮಲ್ ಹೆರಿಗೆ ಆಗುತ್ತೆ ಎಂದು ಕಾದು ಕುಳಿತಿದ್ದೇವೆ. ಆದರೆ ಈ ರೀತಿ ಆಗಿದೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.