Accident: ಶಿರೂರು ಟೋಲ್ ಗೇಟ್ಗೆ ಆಯಂಬುಲೆನ್ಸ್ ಡಿಕ್ಕಿ; ಮೂವರು ಸಾವು

ಅಪಘಾತದಲ್ಲಿ ಮೂವರ ದುರ್ಮರಣ
ಹೊನ್ನಾವರದಿಂದ ಉಡುಪಿ ಜಿಲ್ಲೆಗೆ ರೋಗಿಗಳನ್ನು ಚಿಕಿತ್ಸೆಗೆ ಕರೆತರುತ್ತಿದ್ದ ಆಂಬುಲೆನ್ಸ್, ಬೈಂದೂರು ತಾಲ್ಲೂಕಿನ ಶಿರೂರು ಟೋಲ್ ಗೇಟ್ ಬಳಿ ಭೀಕರ ಅಪಘಾತಕ್ಕೀಡಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಶಿರೂರು ಟೋಲ್ ಪ್ಲಾಝಾ ಬಳಿಗೆ ಬರುತ್ತಿದ್ದಂತೆಯೇ ಟೋಲ್ ಗೇಟ್ ಸಿಬ್ಬಂದಿಯನ್ನು ತಪ್ಪಿಸಲು ಹೋಗಿ ವಾಹನವು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಮೂವರು ಮೃತಟ್ಟಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಆಯಂಬುಲೆನ್ಸ್ ಸಂಚಾರಕ್ಕೆ ನೆರವು ನೀಡಲು ಮುಂದಾಗಿದ್ದ ಟೋಲ್ ಸಿಬ್ಬಂದಿಗಳು ಕೂಡ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಆಂಬುಲೆನ್ಸ್ ವೇಗವಾಗಿ ಬಂದು ಟೋಲ್‌ಗೆ ಡಿಕ್ಕಿಯಾಗುವ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ.
ಮೃತರ ಹೆಸರು ತಿಳಿದುಬಂದಿಲ್ಲ. ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಬುಲೆನ್ಸ್‌ನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್ ವಾಹನವನ್ನು ಗಮನಿಸಿದ ಟೋಲ್ ಸಿಬ್ಬಂದಿ ರಸ್ತೆಗೆ ಅಡ್ಡಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಆಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.