
ಭೋಪಾಲ್, ಜು. 20: ಮಧ್ಯಪ್ರದೇಶದಲ್ಲಿ ಈ ತಿಂಗಳ ಆರಂಭದಲ್ಲಿ ನಡೆದ ಪೌರಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಎಐಎಂಐಎಂ ಒಟ್ಟು 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಬುಧವಾರ ನಡೆದ ಎರಡನೇ ಹಂತದ ಚುನಾವಣೆಯ ಮತ ಎಣಿಕೆಯಲ್ಲಿ ಎಐಎಂಐಎಂ 3 ಸ್ಥಾನಗಳಲ್ಲಿ ಜಯ ಗಳಿಸಿದೆ.
ಜುಲೈ 6ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಅಸದುದ್ದೀನ್ ಉವೈಸಿ ನೇತೃತ್ವದ ಎಐಎಂಐಎಂ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಜುಲೈ 13ರಂದು ನಡೆದ ಚುನಾವಣೆಯ ಮತ ಎಣಿಕೆ ಈಗ ನಡೆಯುತ್ತಿದ್ದು, ಈ ತನಕ ಎಐಎಂಐಎಂ 3 ಸ್ಥಾನಗಳನ್ನು ಗೆದ್ದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಎಐಎಂಐಎಂ ಖರ್ಗಾಂವ್ ನಗರಪಾಲಿಕೆಯಲ್ಲಿ ಮೂರು ಸ್ಥಾನಗಳಲ್ಲಿ ಗೆದ್ದುಕೊಂಡಿದೆ.
ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದಲ್ಲಿ ಎಐಎಂಐಎಂ ಇದೇ ಮೊದಲ ಬಾರಿಗೆ ಪೌರಾಡಳಿತ ಚುನಾವಣೆಯಲ್ಲಿ ಸ್ಪರ್ಧಿಸಿದೆ.