Karnataka SSLC Supplementary Exam Result `SSLC’ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ಇಂದು ಮಧ್ಯಾಹ್ನ 12 ಗಂಟೆಗೆ ‘ವೆಬ್ ಸೈಟ್’ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಇಂದು ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಫಲಿತಾಂಶ ಲಭ್ಯ ವೀಕ್ಷಿಸಬಹುದಾಗಿದೆ.
ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಲಾಗಲಿದೆ. ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.
ನಾಳೆ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ https://karresults.nic.in/ ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ