fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Feature articlesKarnataka NewsNationalScience
Trending

ಸಾವಿನಲ್ಲೂ ಸಾರ್ಥಕತೆ ಮೆರೆದ ಗ್ರಾಮೀಣ ಯುವಕ: ಯುವಕನ ಮಿದುಳು ನಿಷ್ಕ್ರಿಯ, ನಾಲ್ವರಿಗೆ ಅಂಗಾಂಗ ದಾನ ನಾಲ್ವರ ಜೀವ ಉಳಿಸಿ ಸಮಾಜಕ್ಕೆ ಮಾದರಿ..!!

ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ  ಪೊಲೀಸ್ ಇಲಾಖೆಯ  ಕಾರ್ಯ ಅತ್ಯಂತ ಶ್ಲಾಘನೀಯವಾದ್ದು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಖಾನಾಪೂರ ಹತ್ತಿರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನ ತಲೆಗೆ ಗಂಭೀರ ಪೆಟ್ಟು ಬಿದ್ದ ಕಾರಣ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ. 26 ವರ್ಷದ ಯುವಕ ತನ್ನ ಅಂಗಾಂಗಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

 

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡಿದ್ದ ಯುವಕನೋರ್ವ ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ ನಾಲ್ಕು ಜನರ ಜೀವವನ್ನು ಉಳಿಸಿ ಇತರರಿಗೆ ಮಾದರಿಯಾಗಿದ್ದಾನೆ. ಹೃದಯವನ್ನು ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ನಿರ್ಧರಿಸಲಾಗಿದೆ.

ಲೀವರ (ಜಠರ) ಅನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬ್, ಎರಡೂ ಕಿಡ್ನಿಗಳನ್ನು ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ಜೀರೋ ಟ್ರಾಫಿಕ್ ಮೂಲಕ ಕಳುಹಿಸಿಕೊಡಲಾಯಿತು. ಪೆÇಲೀಸರು ಸಂಪೂರ್ಣವಾಗಿ ಜೀರೋ ಟ್ರಾಫಿಕ್ ಅಥವಾ ಗ್ರೀನ ಕಾರಿಡಾರ (ಹಸಿರು ಪಥ) ಮೂಲಕ ಅಂಗಾಂಗಗಳನ್ನು ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.

ಖಾನಾಪೂರ ತಾಲೂಕಿನ ಜಾಂಬೋಟಿ ಹತ್ತಿರದ ಅಮಟೆ ಗ್ರಾಮದ ನಿವಾಸಿ ಕೃಷಿ ಕುಟುಂಬ ಸಹದೇವ ಅರ್ಜುನ ಗಾಂವಕರ(26) ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಮೆದುಳಿಗೆ ತೀವ್ರತರವಾದ ಗಾಯವಾದ್ದರಿಂದ ಚಿಕಿತ್ಸೆಗೆ ಫಲಿಸದೇ ಮೆದುಳು ನಿಷ್ಕ್ರೀಯಗೊಂಡು ತನ್ನ ಕಾರ್ಯವನ್ನು ನಿಲ್ಲಿಸಿತ್ತು. ಆದರೆ ಉಳಿದ ಅಂಗಾಂಗಗಳು ಕರ್ಯನಿರ್ವಹಿಸುತ್ತಿದ್ದವು. ಮೆದುಳು ನಿಷ್ಕ್ರಿಯಗೊಂಡ ಯುವಕನ ತಂದೆ ತಾಯಿಗೆ ಹಾಗೂ ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ, ನಿಮ್ಮ ಮಗ ನೀಡುವ ಅಂಗಾಂಗಗಳಿಂದ ಇನ್ನೊಬ್ಬರ ಜೀವ ಉಳಿಯುತ್ತದೆ ಎಂದು ಹೇಳಿದಾಗ, ಸ್ವಇಚ್ಚೆಯಿಂದ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿದರು.

 

ಯುವಕ ಮೃತಪಟ್ಟರೂ ಕೂಡ 4 ಜನರ ಜೀವ ಉಳಿಸಿ ಸಾರ್ಥಕತೆ ಮೆರೆದರು. ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ  ಪೊಲೀಸ್ ಇಲಾಖೆಯ  ಕಾರ್ಯ ಅತ್ಯಂತ ಶ್ಲಾಘನೀಯವಾದ್ದು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್ ಕಾರಿಡಾರ ನಿರ್ಮಿಸಿ ಅಂಗಾಂಗಗಳನ್ನು ಶೀಘ್ರ ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು. ಮೃತರು ತಂದೆ, ತಾಯಿ, ಸಹೋದರ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಈ ಸಂದರ್ಭದಲ್ಲಿ ಡಾ. ಬಸವರಾಜ ಬಿಜ್ಜರಗಿ ಉಪಸ್ಥಿತರಿದ್ದರು. ಅಂಗಾಂಗಗಳನ್ನು ದಾನ ಮಾಡಿದ ವ್ಯಕ್ತಿ ಹಾಗೂ ಆತನ ಕುಟುಂಬ ಸದಸ್ಯರ ಕಾರ್ಯವನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ ಅವರು ಅಭಿನಂದಿಸಿದ್ದಾರೆ.

ಲಾಖೆಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: