Karnataka NewsNationalPolitics
ಇಂದು ಸಿಎಂ ಬೊಮ್ಮಾಯಿ ದೆಹಲಿಗೆ : ರಾಷ್ಟ್ರಪತಿ ಪದಗ್ರಹಣದಲ್ಲಿ ಭಾಗಿ

ಬೆಂಗಳೂರು : ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಜುಲೈ 24 ರ ಇಂದು ದೆಹಲಿಗೆ ತೆರಳಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದು, ಬಳಿಕ ದೆಹಲಿಯಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜೊತೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಸಭೆ ಬಳಿಕ ಇಂದು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಸೋಮವಾರ ರಾಷ್ಟ್ರದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕೇಂದ್ರ ಸಚಿವರನ್ನು ಭೇಟಿಯಾಗಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.