Crime NewsKarnataka News
ಭೀಕರ ಸ್ಫೋಟ; 9 ಜನರಿಗೆ ಗಂಭೀರ ಗಾಯ ಸ್ಪಾರ್ಕ್ ತಯಾರಿಕಾ ಫ್ಯಾಕ್ಟರಿಯಲ್ಲಿ ಅವಘಡ

ಹುಬ್ಬಳ್ಳಿ: ಸ್ಪಾರ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ತಾರಿಹಾಳದಲ್ಲಿ ನಡೆದಿದೆ.
ಬರ್ತಡೇ ಕೇಕ್ ಮೇಲೆ ಇಡುವ ಸ್ಪಾರ್ಕ್ ತಯಾರಿಕಾ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಏಕಾಏಕಿ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಾರ್ಖಾನೆಯಲ್ಲಿದ್ದ ಕಾರ್ಮಿಕರು ಗಾಯಗೊಂಡಿದ್ದಾರೆ.
ಸಧ್ಯದ ಮಾಹಿತಿ ಪ್ರಕಾರ 9 ಜನರು ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 4 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಫ್ಯಾಕ್ಟರಿ ಒಳಗಡೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.