ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ

ಬೆಳಗಾವಿಯಲ್ಲಿ ಮುಂಬರುವ ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲೆಯಲ್ಲಿ ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಬೇಯನ್ನು ಹಮ್ಮಿಕೊಳ್ಳಲಾಗಿತ್ತು.
ಹೌದು ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗಣೇಶೋತ್ಸವ ಆಚರಣೆ ಕುರಿತಂತೆ ಈಗ ಅನುಮತಿ ಇದೆ. ಆದರೆ ಮುಂಬರುವ ದಿನಗಳಲ್ಲಿ ಸರಕಾರ ಹಾಗೂ ನ್ಯಾಯಾಲಯಗಳು ಏನು ಆದೇಶಗಳನ್ನು ಹೊರಡಿಸುತ್ತವೆಯೋ ಅದನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಗಣೇಶೋತ್ಸವಕ್ಕೆ ಇನ್ನೂ ಕಾಲಾವಕಾಶವಿದೆ.
ಇನ್ನು ನಾವು ಜನ ಪ್ರತಿನಿಧಿಗಳನ್ನು ಕರೆಸಿ ಸಭೆ ಮಾಡುತ್ತೇವೆ. ಇನ್ನು ಈ ವೇಳೆ ಡಿಜೆ ಬಳಕೆಗೆ ಅವಕಾಶವಿಲ್ಲ. ಹಾಗಾಗಿ ಈ ಕುರಿತಂತೆ ನ್ಯಾಯಾಲಯದ ಸ್ಪಸ್ಟ ಆದೇಶವಿದೆ.
ಇನ್ನು ಮುಂಬರುವ ದಿನಗಳಲ್ಲಿ ಸರಕಾರ ಈಗಿರುವ ನಿಯಮಗಳಲ್ಲಿ ಸಡಿಲಿಕೆ ನೀಡಿದರೆ ಅದನ್ನು ತಿಳಿಸಲಾಗುತ್ತದೆ ಎಂದರು.