fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime NewsKarnataka News

ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್​!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ವಿಜಯನಗರ: ಕೂಡ್ಲಿಗಿ ತಾಲೂಕಿನ ಕನ್ನಬೋರಯ್ಯಹಟ್ಟಿಯಲ್ಲಿ ನಡೆದ ಯುವತಿಯ ಭೀಕರ ಕೊಲೆ ಪ್ರಕರಣದ ಆರೋಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಆರೋಪಿ ಭೋಜರಾಜ್​ 15 ವರ್ಷದ ಅಪ್ರಾಪ್ತೆಯನ್ನು ಮದುವೆ ಆಗಿರುವ ಆರೋಪ ಕೇಳಿಬಂದಿದೆ.

ಹೀಗಾಗಿ ಆರೋಪಿ ವಿರುದ್ಧ ಬಾಲ್ಯ ವಿವಾಹ ಕಾಯ್ದೆ ಹಾಗೂ ಪೊಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತಂದೆ-ತಾಯಿ ಹಾಗೂ ಹುಡುಗಿಯ ತಂದೆ-ತಾಯಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್​!

ಖಾನಾಹೊಸಹಳ್ಳಿ ಠಾಣೆಯಲ್ಲಿ ಕೇಸು ದಾಖಳಾಗಿದೆ. ಅಪ್ರಾಪ್ತೆಯ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರೆಸುತ್ತೇವೆ ಎಂದು ವಿಜಯನಗರ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಆರೋಪಿ ಭೋಜರಾಜ, ನಿರ್ಮಾಲಾ ಎಂಬ ಯುವತಿಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ರುಂಡ ಸಮೇತ ಬಂದಿದ್ದ. ಭೋಜರಾಜ ನಿರ್ಮಲಾಳನ್ನು ಪ್ರೀತಿಸುತ್ತಿದ್ದ. ನಿರ್ಮಲಾ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ನಿರ್ಮಲಾಳನ್ನು ಮದುವೆ ಮಾಡಿಕೊಡುವಂತೆ ಈ ಮೊದಲು ಆಕೆಯ ಪಾಲಕರಲ್ಲಿ ಈತ ಕೇಳಿದ್ದ. ಆದರೆ ಆಕೆಯ ಮನೆಯವರು ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೇರೊಬ್ಬಳನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದರೆ ನಿರ್ಮಲಾಳ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ. ಬೇರೊಂದು ಊರಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು. ಇದೇ ಸಮಯಕ್ಕೆ ಕಾಯುತ್ತಿದ್ದ ಈ ಪಾಗಲ್​ ಪ್ರೇಮಿ, ಮಚ್ಚಿನಿಂದ ಆಕೆಯ ತಲೆ ಕಡಿದು ರುಂಡದೊಂದಿಗೆ ಠಾಣೆಗೆ ಶರಣಾಗಿದ್ದಾನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: