Feature articlesKarnataka News
RPD ಕ್ರಾಸ್ ಬಳಿ ಡ್ರೈನೇಜ್ ಪೈಪ್ ಲೀಕ್ ದುರಸ್ಥಿ ಆರಂಭಿಸಿದ ಬೆಳಗಾವಿಯ ಮಹಾನಗರ ಪಾಲಿಕೆ

ಸಾರ್ವಜನಿಕರ ಟೀಕೆ, ಆಗ್ರಹದಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿಯ ಮಹಾನಗರ ಪಾಲಿಕೆ ಅಧಿಕಾರಿಗಳು RPD ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.
ಕಳೆದ 15 ದಿನಗಳ ಹಿಂದೆ RPD ಕ್ರಾಸ್ ಬಳಿಯ ಡ್ರೈನೇಜ್ ಪೈಪ್ ಲೀಕ್ ಆಗಿ ರಸ್ತೆಯ ಮೇಲೆ ಕಲುಷಿತ ನೀರು ಹರಿಯುತ್ತಿತ್ತು. ಈ ಸಂದರ್ಭದಲ್ಲಿ ಮೊದಲೇ ದೊಡ್ಡ ಪ್ರಮಾಣದಲ್ಲಿ ಮಳೆಯಾಗುತ್ತಿತ್ತು. ಇದರಿಂದ ಮಳೆ ನೀರಿನ ಜೊತೆಗೆ ಡ್ರೈನೇಜ್ ನೀರು ಕೂಡ ರಸ್ತೆಯ ಮೇಲೆ ಹರಿಯುತ್ತಿತ್ತು.
ಈ ಬಗ್ಗೆ ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ನಮ್ಮ ನ್ಯೂಸ್‍ನಲ್ಲಿ ಸುದ್ದಿಯನ್ನು ಕೂಡ ಪ್ರಸಾರ ಮಾಡಲಾಗಿತ್ತು.ಇದರಿಂದ ಎಚ್ಚೆತ್ತುಕೊಂಡಿರುವ ಪಾಲಿಕೆ ಅಧಿಕಾರಿಗಳು ಮಂಗಳವಾರ ಕಾಮಗಾರಿ ಆರಂಭಿಸಿದ್ದಾರೆ. ದುರಸ್ಥಿ ಕಾಮಗಾರಿ ಕೈಗೊಂಡಿದ್ದಾರೆ. ಆದಷ್ಟು ಬೇಗನೇ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಟ್ಟರೆ ಅಷ್ಟೇ ಸಾಕು.