Crime NewsKarnataka News
ಬೆಳಗಾವಿ ಪೊಲೀಸರ ಕಾರ್ಯಾಚರಣೆ: 7 ಲಕ್ಷ ಮೌಲ್ಯದ ಅಕ್ರಮ ಪಡಿತರ ವಶಕ್ಕೆ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಬೆಳಗಾವಿ ಗ್ರಾಮೀಣ ಪೊಲೀಸರು ಸುಮಾರು 7 ಲಕ್ಷ ರೂಪಾಯಿ ಮೌಲ್ಯದ 31 ಟನ್ , 320 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಪಡಿತರ ಸಂಗ್ರಹ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಳಗಾವಿ ಗ್ರಾಮೀಣ ಠಾಣೆ ಪಿಐ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ವಾಸಿಮ ಮುಜಾವರ ಹುಂಚ್ಯಾನಟ್ಟಿ, ಸಂಜಯ ಭೋಸಲೆ ಪೀರಣವಾಡಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಅಕ್ರಮವಾಗಿ ಸಂಗ್ರಹಿಸಿಟ್ಟ 7,21,050/-ರೂ ಮೌಲ್ಯದ 31 ಟನ್, 320 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ.
ದಾಳಿ ಕೈಗೊಂಡ ಗ್ರಾಮೀಣ ಪಿಐ ಮತ್ತು ಅವರ ತಂಡವನ್ನು ಪೊಲೀಸ್ ಆಯುಕ್ತರು, ಡಿಸಿಪಿರವರುಗಳು ಶ್ಲಾಘಿಸಿದ್ದಾರೆ.