ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಳಗಾವಿಯಲ್ಲಿ ಮಟಕಾ ಅಡ್ಡೆ ಮೇಲೆ ದಾಳಿ: ಮೂವರ ಬಂಧನ

ಬೆಳಗಾವಿ ನಗರದ ಹಂಸ ಟಾಕೀಜ್ ರಸ್ತೆಯಲ್ಲಿ ಓಸಿ ಮಟಕಾ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ನಿಂಗನಗೌಡ ಪಾಟೀಲ ನೇತೃತ್ವದ ತಂಡ ಬೆಳಗಾವಿ ನಗರದ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದೆ.
ಬಂಧಿತರನ್ನು ಅಭಿಷೇಕ ಪ್ರಕಾಶ ಶಿವಾಪೂರ ಪಾಂಗುಳ ಗಡ್ಡೆ, ಶುಭಂ ಲಕ್ಷ್ಮಣ ತುಪಾರಿ ಖಡಕ ಗಲ್ಲಿ ಹಾಗೂ ಮಡಚು ಕೃಷ್ಣ ಗಾವಡೆ ಕಂಗ್ರಾಳ ಕೆಹೆಚ್ ಎಂದು ತಿಳಿದುಬಂದಿದೆ.
ಬಂಧಿತರಿಂದ 18,700 ರೂಪಾಯಿ ನಗದು, 3 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧವಾಗಿ ಪಿಐ, ಸಿಸಿಬಿ ರವರು ನೀಡಿದ ದೂರಿನ ಮೇರೆಗೆ ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವಿಶೇಷ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಇನ್ಸ್‌ಪೆಕ್ಟರ್ ನಿಂಗನಗೌಡ ಪಾಟೀಲ ಹಾಗೂ ಸಿಬ್ಬಂದಿಗಳಾದ ಹೆಚ್ ಎಸ್ ನಿಸುನ್ನವರ, ಎಮ್ ಎಮ್ ವಡೇಯರ್, ಎಸ್ ಎಮ್ ಬಜಂತ್ರಿ, ವಾಯ್ ಡಿ ನದಾಫ್ ರವರುಗಳ ಕಾರ್ಯವನ್ನು ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.