ಹುಂಚ್ಯಾನಟ್ಟಿ, ಪೀರನವಾಡಿ ಗ್ರಾಮದ ಗೋದಾಮುಗಳಲ್ಲಿ ಅಕ್ರಮವಾಗಿ ಸಂಗ್ರಹಿಟ್ಟುಕೊಂಡಿದ್ದ 7 ಲಕ್ಷ ರೂ. ಮೌಲ್ಯದ 31.32 ಟನ್ ಅಕ್ರಮ ಪಡಿತರ ಅಕ್ಕಿ ವಶ

ಬೆಳಗಾವಿ: ನೆರೆಯ ಮಹಾರಾಷ್ಟ್ರ, ಗೋವಾ ರಾಜ್ಯಗಳಿಗೆ ಸಾಗಾಟ ಮಾಡುವ ಉದ್ದೇಶದಿಂದ ಗೋದಾಮುಗಳಲ್ಲಿ ಅಕ್ರಮವಾಗಿ ಸಂಗ್ರಹಿಟ್ಟುಕೊಂಡಿದ್ದ 7 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಗ್ರಾಮೀಣ ಪೊಲೀಸರು, ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬೆಳಗಾವಿ ತಾಲೂಕಿನ ಪೀರಣವಾಡಿಯ ಸಂಜಯ ಭೋಸಲೆ, ಚ್ಯಾನಟ್ಟಿ ಗ್ರಾಮದ ವಾಸಿಂ ಮುಜಾವರ ಬಂಧಿತರು. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ನ್ಯಾಯಬೆಲೆ ಅಂಗಡಿಕಾರರು ಮತ್ತು ಪಡಿತರದಾರರಿಂದ ಅಕ್ಕಿ ಸಂಗ್ರಹಿಸಿ ತಾಲೂಕಿನ ಹುಂಚ್ಯಾನಟ್ಟಿ, ಪೀರನವಾಡಿ ಗ್ರಾಮದ ಗೋದಾಮುಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದರು. ಈ ಕುರಿತು ಮಾಹಿತಿ ಆಧಾರದ ಮೇಲೆ ಭಾನುವಾರ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಸುಮಾರು 7 ಲಕ್ಷ ರೂ. ಮೌಲ್ಯದ 31.32 ಟನ್ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ಪೊಲೀಸರ ಕಾರ್ಯಾಚರಣೆ: 7 ಲಕ್ಷ ಮೌಲ್ಯದ ಅಕ್ರಮ ಪಡಿತರ ವಶಕ್ಕೆ ಇಬ್ಬರು ಆರೋಪಿಗಳ ಬಂಧನ
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ನ್ಯಾಯಬೆಲೆ ಅಂಗಡಿಕಾರರು ಮತ್ತು ಪಡಿತರರದಾರರಿಂದ ಕಡಿಮೆ ದರದಲ್ಲಿ ಅಕ್ಕಿಯನ್ನು ಖರೀದಿಸಿ ಹುಂಚ್ಯಾನಟ್ಟಿ, ಪೀರನವಾಡಿ ಗ್ರಾಮದ ಗೋದಾಮುಗಳಲ್ಲಿ ಸಂಗ್ರಹಿಸುತ್ತಿದ್ದರು. ಬಳಿಕ ಈ ಅಕ್ಕಿಯನ್ನು ಲಾರಿಗಳ ಮೂಲಕ ಗೋವಾ, ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧ ನಗರ ಪ್ರದೇಶಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದರು. ನಮ್ಮ ರಾಜ್ಯದ ಪಡಿತರ ಅಕ್ಕಿಯನ್ನು ಕಡಿಮೆ ದರದಲ್ಲಿ ಸಂಗ್ರಹಿಸಿಕೊಂಡು ನಗರ ಪ್ರದೇಶಗಳಲ್ಲಿರುವ ಹೋಟೆಲ್, ಕಾರ್ಮಿಕರಿಗೆ, ಖಾಸಗಿ ಅಂಗಡಿಕಾರರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ದಾಳಿ ವೇಳೆ ತಿಳಿದು ಬಂದಿದೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.