40 ಮಹಿಳಾ ಸ್ವಸಹಾಯ ಸಂಘಗಳಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

40 ಮಹಿಳಾ ಸ್ವಸಹಾಯ ಸಂಘಗಳಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ –
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ 40 ಮಹಿಳಾ ಸ್ವಸಹಾಯ ಸಂಘಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ತಲಾ ಒಂದು ಲಕ್ಷ ರೂ,ಗಳ ಪ್ರೋತ್ಸಾಹ ಧನದ ಚೆಕ್ ಗಳನ್ನು ವಿತರಿಸಿದರು.
ಕೋವಿಡ್ ನಂತರ ಆರ್ಥಿಕ ಸಂಪನ್ಮೂಲಗಳಿಲ್ಲದೇ ಕಳೆಗುಂದಿದ ಗ್ರಾಮೀಣ ಮಹಿಳಾ ಸ್ವಸಹಾಯ ಗುಂಪುಗಳ ಪುನಶ್ಚೇತನಕ್ಕೆ ಈ ಪ್ರೋತ್ಸಾಹಧನ ನೀಡಲಾಗಿದೆ.
ಸ್ವಸಹಾಯ ಸಂಘಗಳು ಸ್ವಾವಲಂಬನೆಯ ಬದುಕು ಕಟ್ಟಿಕೊಂಡಿದ್ದವು. ಆದರೆ ಕೋವಿಡ್ ನಂತರ ಮಹಿಳಾ ಸ್ವಸಹಾಯ ಸಂಘಗಳಿಗೆ ಆರ್ಥಿಕವಾಗಿ ಹಿನ್ನಡೆಯಾಗಿದೆ. ಇದರಿಂದಾಗಿ ಹಲವಾರು ಮಹಿಳೆಯರ ಕನಸುಗಳು ನುಚ್ಚುನೂರಾಗಿವೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಸಹಾಯ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ವಿವಿಧ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಒಕ್ಕೂಟದ ಉಪಾಧ್ಯಕ್ಷರಾದ ಗೌರಂಭಿಕಾ ಗಲಭಿ, ಚಂದ್ರಶೇಖರ ಸುಕ್ಸಾರೆ ಮುಂತಾದವರು ಉಪಸ್ಥಿತರಿದ್ದರು.