Crime NewsKarnataka News
ಇಸ್ಟೀಟ್ ಅಡ್ಡೆ ಮೇಲೆ ಪೊಲೀಸ್ ಭರ್ಜರಿ ದಾಳಿ

ಬೈಲಹೊಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಗ್ಯಾಂಬ್ಲಿಂಗ್ ಅಡ್ಡೆಯನ್ನು ಭೇದಿಸಿದ್ದಾರೆ.
ಹೌದು ನಿನ್ನೆ ತಡರಾತ್ರಿ ಬೈಲಹೊಂಗಲ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಇಸ್ಪೀಟ್ ಆಡುತ್ತಿದ್ದ 7 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 1,10,320 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ