Crime NewsKarnataka News
BREAKING NEWS : ಫಾಜಿಲ್ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಮಂಗಳಪೇಟೆಗೆ ಮೃತದೇಹ ಶಿಫ್ಟ್

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಮಹಮ್ಮದ್ ಫಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಫಾಜಿಲ್ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಫಾಝಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಸದ್ಯ ಮೃತದೇಹವನ್ನು ಸುರತ್ಕಲ್ ನಿಂದ ಮಂಗಳಪೇಟೆಗೆ ಮೃತದೇಹವನ್ನು ಶಿಫ್ಟ್ ಮಾಡಲಾಗಿದೆ.
ಫಾಜಿಲ್ ಹತ್ಯೆಯಿಂದ ಸುರತ್ಕಲ್ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.