fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EducationKarnataka NewsSports

ಯಾವುದೇ ಸೌಲಭ್ಯ ನೀಡದ ಕ್ರೀಡಾ ಇಲಾಖೆಯಿಂದ ಹಣ ವಸೂಲಿ..! ಬೆಳಗಾವಿಯಲ್ಲಿ ಆಮ್ ಆದ್ಮಿ ಘಟಕದ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿ: ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಭ್ಯಾಸ ಮಾಡುವವರಿಗೆ ವಿಧಿಸಲಾದ ದರವನ್ನು ಹಿಂಪಡೆಯುವಂತೆ ಆಗ್ರಹಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಆಮ್ ಆದ್ಮಿ (ಸಿವಾಯ್ ಎಸ್ ಎಸ್) ಘಟಕ ಪ್ರತಿಭಟನೆ ನಡೆಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಮನವಿ ಸಲ್ಲಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳು, ವಾಕಿಂಗ್ ಬರುವ ಜನರಿಗೆ ತಾವು ನಿಗದಿ ಪಡಿಸಿರುವ ಪ್ರವೇಶ ಶುಲ್ಕ ಸರಕಾರದ ಆದೇಶ ಸಂಖ್ಯೆ 129 ಇಪಿಇ 2022ರ ಅನ್ವಯ ಕಳೆದ 7 ಜುಲೈ 2022ರಂದು ಆದೇಶ ಹೊರಡಿಸಿದೆ. ಇದು ಸಮಂಜಸವಲ್ಲ ಎಂದು ಮನವಿಯಲ್ಲಿ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಶುಲ್ಕ ವಿಧಿಸಿದರೆ ವಸತಿ ನಿಯಲಗಳಲ್ಲಿ ಇದ್ದುಕೊಂಡು ಕ್ರೀಡೆಯಲ್ಲಿ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ನಿರಾಸೆಯ ಮನೋಭಾವ ಮೂಡಿ ಕ್ರೀಡೆಯತ್ತ ಮುಖ ಮಾಡದೆ ಇದ್ದರೆ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಕ್ರೀಡಾಪಟುಗಳನ್ನು ಕಳೆದುಕೊಳ್ಳುವ ಆತಂಕ ನಿರ್ಮಾಣವಾಗುತ್ತದೆ ಎಂದ ಮನವಲ್ಲಿ ತಿಳಿಸಿದರು‌.

ಅಲ್ಲದೆ, ನಗರದಲ್ಲಿ ಎಷ್ಟೋ ಜನರು ಜಿಲ್ಲಾ ಕ್ರೀಡಾಂಗಣದಲ್ಲಿ ವಾಕಿಂಗ್ ಮಾಡಲು ಬರುತ್ತಾರೆ. ಅದಕ್ಕೂ ಶುಲ್ಕ ನಿಗದಿ ಮಾಡಿದರೆ ಇನ್ನೂ ಈ ಕ್ರೀಡಾಂಗಣಕ್ಕೆ ಬರುವುದಾದರೂ ಹೇಗೆ. ಕೇಂದ್ರ ಸರ್ಕಾರ ಸ್ವಾತಂತ್ರೋತ್ಸವದ ಅಂಗವಾಗಿ ಆಜಾದೀ ಕಾ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾಪಟುಗಳಿಗೆ ಹಾಗೂ ವಾಕಿಂಗ್ ಬರುವ ಜನರಿಗೆ ಶುಲ್ಕ ವಿಧಿಸುವುದು ಸರಿಯಲ್ಲ. ಈ ಮೊದಲ ಇದ್ದ ಹಾಗೆ ಜಿಲ್ಲಾ ಕ್ರೀಡಾಂಗಣವನ್ನು ಮುಕ್ತವಾಗಿ ಪ್ರವೇಶಕ್ಕೆ ಅವಕಾಶ ಕೊಡಬೇಕು. ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಕೆಲಸವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಾಡಬೇಕು. ಇಲ್ಲದಿದ್ದಲ್ಲಿ ಆಮ್ ಆದ್ಮಿ ಪಾರ್ಟಿ ಯುವ ಘಟಕದಿಂದ (ಸಿವಾಯ್‌ಎಸ್‌ಎಸ್) ನಿಂದ ಮುಂದಿನ ದಿನಗಳಲ್ಲಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ವರಿಸಿದ್ದಾರೆ.

ಈ ವೇಳೆ ಸೈಯದ್ ಜುನೇದ್ ಪಾಶಾ, ಸೌರವ ಕಾಳೆ, ಉಸಮಾನ್ ಖಾನ್, ಪ್ರಶಾಂತ ಗೊಂದಳಿ, ಮಂಜುನಾಥ ಕೊಪ್ಪಳ, ಅರ್ಷದ್ ಖಾನ್, ಅರವಿಂದ್ ನಾಯಕ, ಮಹಾವೀರ‌ ಚೌಗಲೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: