ರಾಮತೀರ್ಥ ನಗರದಲ್ಲಿ ಮುಸ್ಲಿಂ ಸಮುದಾಯದ ಸ್ಮಶಾನಕ್ಕೆ ಜಮೀನು ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಬೆಳಗಾವಿಯ ರಾಮತೀರ್ಥ ನಗರದಲ್ಲಿ ಮುಸ್ಲಿಂ ಸಮುದಾಯದ ಸ್ಮಶಾನಕ್ಕೆ ಜಮೀನು ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ರಾಮರ್ತೀರ್ಥ ನಗರ ಮುಸ್ಲಿಂ ಬಾಂಧವರು ಮುಸ್ಲಿಂ ಕಮ್ಯುನಿಟಿ ವೆಲ್‍ಫೇರ್ ಸೊಸೈಟಿ ನೇತೃತ್ವದಲ್ಲಿ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
: ಈ ವೇಳೆ ಮಾತನಾಡಿದ ಮುಸ್ಲಿಂ ಕಮ್ಯುನಿಟಿ ವೆಲ್‍ಫೇರ್ ಸೊಸೈಟಿ ಅಧ್ಯಕ್ಷ ಮಹಮ್ಮದ್ ಜಮೀರುಲ್ಲಾ ಮಾತನಾಡಿ ರಾಮತೀರ್ಥ ನಗರದಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ವಾಸಿಸುತ್ತಿದ್ದಾರೆ. ಇಲ್ಲಿ ನಮ್ಮ ಸಮಾಜಕ್ಕೆ ಯಾವುದೇ ರೀತಿ ಸ್ಮಶಾನ ಭೂಮಿ ಇಲ್ಲ.
ನಮಗೆ ಅಂತ್ಯಸಂಸ್ಕಾರಕ್ಕೆ ಅಂಜುಮನ್ ಸ್ಮಶಾನ ಬಹಳ ದೂರಾಗುತ್ತಿದೆ. ಇದರಿಂದ ನಮಗೆ ಬಹಳಷ್ಟು ಸಮಸ್ಯೆ ಆಗುತ್ತಿದೆ. ಆದ್ದರಿಂದ ರಾಮತೀರ್ಥ ನಗರದಲ್ಲಿಯೇ ಸ್ಮಶಾನ ಭೂಮಿ ನಮಗೆ ಮಾಡಿಕೊಟ್ಟರೆ ತುಂಬಾ ಅನುಕೂಲ ಆಗುತ್ತದೆ ಎಂದು ಒತ್ತಾಯಿಸಿದರು.