Belagavi NewsKarnataka NewsNational
Trending
ಕರ್ನಾಟಕ ಬಸ್ ಗಳ ಟಾರ್ಗೆಟ್ ಮಹಾರಾಷ್ಟ್ರ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹ

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಟಾರ್ಗೆಟ್ ಮಾಡಲಾಗುತ್ತಿರುವದನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ ಖಂಡಿಸಿದೆ.
ರಾಜ್ಯ ರಸ್ತೆ ಸಾರಿಗೆ ಬಸ್ ಗಳಿಗೆ ಕಪ್ಪು ಬಣ್ಣ ಬಳಿದು ವಿರೋಧಿಸಿ ಮಹಾರಾಷ್ಟ್ರ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಲಾಗಿದೆ.
ಮಹಾರಾಷ್ಟ್ರ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಹಾರಾಷ್ಟ್ರದಲ್ಲಿ ಶಿವಸೇನೆ, ಮಹಾರಾಷ್ಟ್ರ ನವ ನಿರ್ಮಾಣ ವೇದಿಕೆ ಪುಂಡಾಟಕ್ಕೆ ಅಸಮಾಧಾನ ವ್ಯಕ್ತಪಡಿಸಿ ,ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ ಅವರು ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸುವಂತೆ ಒತ್ತಾಯಿಸಿದರು.
ಮಹಾರಾಷ್ಟ್ರ ಸರ್ಕಾರದಿಂದ ನ್ಯಾಯಾಂಗ ನಿಂದನೆ ಮಹಾರಾಷ್ಟ್ರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.