ಬೆಳಗಾವಿ ಜನರ ಬಹುದಿನಗಳಿಂದ ಬೇಡಿಕೆಯಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯ ಫ್ಲೇಓವರ್ ನಿರ್ಮಾಣದ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಳಗಾವಿ ಜನರ ಬಹುದಿನಗಳಿಂದ ಬೇಡಿಕೆಯಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯ ಫ್ಲೇಓವರ್ ನಿರ್ಮಾಣದ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿಗೆ ಕಳೆದ ಹಲವು
ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು ಈಗ ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾದ ಮೇಲೆ ಮತ್ತೆ ಸ್ಮಾರ್ಟ್ ಸಿಟಿ ಯೋಜನೆಯನ್ನು ಕೈಗೆತ್ತಿಕೊಂಡಿದೆ.
ರಾಷ್ಟ್ರೀಯ ಹೆದ್ದಾರಿಯಿಂದ ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ಹಾಗೂ ಸರ್ವಿಸ್ ರಸ್ತೆಗೆ ಸಂಬಂಧಿಸಿದಂತೆ ಮಂಗಳವಾರ ಶಾಸಕ ಆಸಿಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಭೆ ನಡೆಸಿದರು.
ಬಳಿಕ ಗಾಂಧೀನಗರ,
ಮಹಾಂತೇಶ ನಗರದ ಬಳಿ ಪ್ಲೈಓವರ್ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ಆಯುಕ್ತರಾದ ಬೋರಲಿಂಗಯ್ಯ,
ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ವೇಳೆ ಭಾಗಿಯಾಗಿದ್ದರು.