Karnataka News
ಬೈಕ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ:: ನವದಂಪತಿ ಸಾವು

ವಿಜಯಪುರ: ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ತಡರಾತ್ರಿ ನಡೆದಿದೆ.
ಪತಿ ಹೊನಮಲ್ಲ ತೆರದಾಳ (31), ಪತ್ನಿ ಗಾಯತ್ರಿ (24) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಹೊನಮಲ್ಲ ಹಾಗೂ ಗಾಯತ್ರಿ ವಿವಾಹ ಕಳೆದ ಮೇ 22 ರಂದು ನೆರವೇರಿತ್ತು. ಮದುವೆಯಾಗಿ 24 ದಿನಗಳಲ್ಲೇ ನವಜೋಡಿ ಸಾವನ್ನಪ್ಪಿದೆ.
ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಬರುವಾಗ ನಡೆದ ದುರ್ಘಟನೆ ಸಂಭವಿಸಿದ್ದು, ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.