ನಾಳೆಯಿಂದಲೇ ಕಣಬರ್ಗಿ ಮುಖ್ಯರಸ್ತೆ ಕಾಮಗಾರಿಗೆ ಚಾಲನೆ: ರಾಜು ಸೇಠ್

ಕಳೆದ ಆರು ತಿಂಗಳಿಂದ ಬಂದ್ ಆಗಿರುವ ಕಣಬರ್ಗಿ ಮುಖ್ಯರಸ್ತೆಯ ಕಾಮಗಾರಿ. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜು ಸೇಠ್ ಅಧಿಕಾರಿ ಹಾಗೂ ಗುತ್ತಿಗೆದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸ್ಥಗಿತಗೊಂಡಿರುವ ಕಾಮಗಾರಿಯನ್ನು ನಾಳೆಯಿಂದ ಕೂಡಲೇ ಆರಂಭಿಸಿ ಗುಣಮಟ್ಟದಲ್ಲಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಬೆಳಗಾವಿಯ ಉಪನಗರ ಕಣಬರ್ಗಿ ಗ್ರಾಮದ ಪ್ರವೇಶ ದ್ವಾರದಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಹಾಗೂ ಆಚೆಗೆ ಮುಖ್ಯರಸ್ತೆ ಕಾಮಗಾರಿಗೆ ಆರು ತಿಂಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಮಧ್ಯದಲ್ಲಿ ಕಾಮಗಾರಿ ನಿಲ್ಲಿಸಲಾಗಿತು. ಇದರಿಂದ ಅಲ್ಲಿನ ನಾಗರಿಕರಿಗೆಹಾಗೂ ವಾಹನ ಸವಾರರು ಪರದಾಡುವಂತಾಗಿತ್ತು.
ತಿಂಗಳ ಹಿಂದೆ ಸುರಿದ ಧಾರಾಕಾರ ಮಳೆಗೆ ಕೆಸರು, ಕೆಸರು ಗದ್ದೆ ನಿರ್ಮಾಣವಾಗಿ ಹಲವು ವಾಹನ ಸವಾರರು, ಪಾದಚಾರಿಗಳು ಬಿದ್ದು ತೀವ್ರ ಗಾಯಗೊಂಡಿದ್ದರು. ಆದ್ದರಿಂದ ಕೂಡಲೇ ಈ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ. ಇಂದು ಈ ಪ್ರದೇಶಕ್ಕೆ ಶಾಸಕ ರಾಜು ಸೇಠ್ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಗರಿಕರ ಸಮಸ್ಯೆಗಳನ್ನು ಆಲಿಸಿದರು.ನಾಳೆಯಿಂದಲೇ ಕಣಬರ್ಗಿ ಮುಖ್ಯರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ರಸ್ತೆ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವ ಮೂಲಕ ನಾಗರಿಕರಿಗೆ ನೆಮ್ಮದಿ ದೊರೆಯಲಿದೆ ಎಂದರು.