ನಾವು ನೀಡಿದ ಕಾರ್ಯಕ್ರಮ ಆಗಬಾರದು ಎಂಬ ಉದ್ದೇಶ BJPಗಿದೆ: ಸಂತೋಷ ಲಾಡ್,

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಕೊಡುತ್ತಾರೆ.
ಕೇಂದ್ರ ಸರ್ಕಾರವನ್ನು ಕೇಳಿ ಗ್ಯಾರೆಂಟಿ ಘೋಷಣೆ ಮಾಡಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪತ್ರದ ಮೂಲಕ ಅವರು ತಾನೇ ಕೊಟ್ಟಿದ್ದು. ಕಳೆದ ಬಾರಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರಕ್ಕೆ ಕೇಳಿ ಕೊಟ್ಟಿದ್ರಾ..?ಪ್ರಣಾಳಿಕೆ ಕೊಡುವಂತದ್ದು ರಾಜ್ಯಕ್ಕೆ ಸಂಬಂಧ ಪಟ್ಟಿದ್ದು.
ಕೇಂದ್ರದವರು ಮಾತು ಕೊಟ್ಟು ವಾಪಸ್ ಪಡೆದ ಉದ್ದೇಶ ಏನು…? ನಾವು ನೀಡಿದ ಕಾರ್ಯಕ್ರಮ ಆಗಬಾರದು ಎಂಬ ಉದ್ದೇಶ ಅವರಿಗಿದೆ. ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ ಎಂದು ಅವರು ಹೇಳಿದರು.
ಶಕ್ತಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳಲ್ಲಿ ಗೊಂದಲ ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಗೊಂದಲ ಇಲ್ಲಾ. ಸುಮಾರು 60 ಸಾವಿರ ಕೋಟಿ ವೆಚ್ಚದಲ್ಲಿ ಆಗುತ್ತಿರುವ ಕಾರ್ಯಕ್ರಮ. ಇದನ್ನು ಅನುಷ್ಠಾನಕ್ಕೆ ತರೋಕೆ ನಾವು ಸಮಯ ನಿಗದಿ ಪಡಿಸಿದ್ದೇವೆ.