Free Bus: ಮಹಿಳೆಯರೇ ಗಮನಿಸಿ, ಉಚಿತ ಪ್ರಯಾಣಕ್ಕೆ ಹೊಸ ರೂಲ್ಸ್; ಸಾರಿಗೆ ಸಚಿವರು ಕೊಟ್ಟ ಶಾಕ್ ಏನು?

ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಕೆಲವು ಗೊಂದಲಗಳು ಉಂಟಾಗಿದ್ದವು.
ತಳ್ಳಾಟ, ನೂಕಾಟ ಸೇರದಂತೆ ಜಡೆ ಜಗಳ ಸಹ ನಡೆದಿದೆ. ಕೆಲವು ಭಾಗಗಳಲ್ಲಿ ತಳ್ಳಾಟ, ನೂಕಾಟದಿಂದ ಬಸ್ ಬಾಗಿಲು, ಕಿಟಕಿಯ ಸರಪಳಿ ಕಿತ್ತುಕೊಂಡು ಬಂದಿದೆ.
ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉಚಿತ ಪ್ರಯಾಣಕ್ಕೆ ಕೆಲವು ಮಾರ್ಗಸೂಚಿ ಪ್ರಕಟಿಸುವ ಸುಳಿವು ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಉಚಿತ ಯೋಜನೆಯನ್ನು ಶಿಸ್ತುಬದ್ಧವಾಗಿ ತರಬೇಕಿದೆ. ಮುಂದೆ ಐದು ವರ್ಷಗಳ ಕಾಲ ಯೋಜನೆ ಜಾರಿಯಲ್ಲಿರಬೇಕಿದೆ. ಕೆಲವು ಮಾರ್ಗಸೂಚಿ ಜಾರಿಗೆ ತರುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಫ್ರೀ ಅಂತ ಎಲ್ಲರೂ ಒಂದೇ ದಿನ ಬಸ್ನಲ್ಲಿ ಪ್ರಯಾಣ ಮಾಡಲು ಸಾಧ್ಯವಿಲ್ಲ. ದೂರದ ಪ್ರಯಾಣಕ್ಕೆ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆದಿದೆ. ಸ್ಟ್ಯಾಂಡಿಂಗ್ ಪ್ರಯಾಣದಿಂದ ಇತರೆ ಪ್ರಯಾಣಿಕರಿಗೆ ತೊಂದರೆ ಆಗಲಿದೆ.
ಯೋಜನೆಯನ್ನು ಕ್ರಮಬದ್ಧವಾಗಿ ಜಾರಿಗೆ ತರುವ ಉದ್ದೇಶದಿಂದ ಕೆಲವು ಮಾರ್ಗಸೂಚಿ ತರೋದು ಅನಿವಾರ್ಯ. ಮೊದಲೇ ಆಸನ ಕಾಯ್ದಿರಿಸಿದ್ರೆ ಎಲ್ಲರೂ ಆರಾಮವಾಗಿ ಪ್ರಯಾಣಿಸಬಹುದು ಅಲ್ಲವಾ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಒಂದು ವಾರ ಒಬ್ಬರು, ಮತ್ತೊಂದು ವಾರ ಅವರು ಹೋಗಲಿ. ಹೀಗೆ ಮಾಡಿದ್ರೆ ಪುರುಷ ಪ್ರಯಾಣಿಕರಿಗೂ ಸೀಟ್ ಸಿಗಲಿದೆ. ಒಂದು ಯೋಜನೆಯಿಂದ ಮತ್ತೊಬ್ಬರಿಗೆ ತೊಂದರೆ ಆಗಬಾರದು ಎಂದರು.
ಈ ಯೋಜನೆ ಎಷ್ಟು ದಿನ ಇರುತ್ತೋ ಏನು? ಈಗಲೇ ಪ್ರಯೋಜನೆ ಪಡೆದುಕೊಳ್ಳಿ ಎಂದು ಬಿಜೆಪಿಯವರು ಪ್ರಚೋದನೆ ನೀಡುತ್ತಿದ್ದಾರೆ. ಈ ಯೋಜನೆ ಮುಂದಿನ ಐದು ವರ್ಷವೂ ಇರಲಿದೆ ಎಂದು ಸಚಿವರು ಹೇಳಿದ್ದಾರೆ.
ವೀಕೆಂಡ್ ಪ್ರಯಾಣಕ್ಕೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಗಳಿವೆ. ಯಾವುದೇ ಮಾರ್ಗಸೂಚಿ ಪ್ರಕಟವಾದ್ರೂ ಅದು ಪ್ರಯಾಣಿಕರ ಸುರಕ್ಷತೆಗಾಗಿ, ಇನ್ನುಳಿದಂತೆ ಪ್ರಯಾಣ ಮಹಿಳೆಯರಿಗೆ ಉಚಿತವಾಗಿರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.