Karnataka News
ರಾಜ್ಯದಲ್ಲಿ ಗೃಹ ಲಕ್ಷ್ಮಿ ಜಾರಿಗೆ ಮುಹೂರ್ತ ಫಿಕ್ಸ್ ?

ಜುಲೈ 14 ರಿಂದ ಗೃಹ ಲಕ್ಷ್ಮಿ ಜಾರಿಗೆ ಸರ್ಕಾರ ಪ್ಲಾನ್ ಮಾಡಿದೆ. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಜುಲೈ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಿದೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮ್ಮುಖದಲ್ಲಿ ಈ ಯೋಜನೆ ಜಾರಿಯಾಗಲಿದೆ. 10 ರಿಂದ 15 ಮಂದಿ ಫಲಾನುಭವಿಗಳನ್ನ ಗುರುತಿಸಿ ಸಾಂಕೇತಿಕವಾಗಿ ಹಣ ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಾಗುತ್ತೆ. ಜುಲೈ 17 ರಿಂದ ಪೂರ್ಣ ಪ್ರಮಾಣದಲ್ಲಿ ಯೋಜನೆ ಜಾರಿಗೆ ಚಿಂತನೆ ನಡೆದಿದೆ.