fbpx
EducationKarnataka News

ಯುವ ನಿಧಿ ಯೋಜನೆ 2023 | Karnataka Yuva Nidhi Scheme 2023 Seva Sindhu Online Application Form

ಕರ್ನಾಟಕ ಹೆಲ್ಪ್ ನ ಓದುಗರಿಗೆ ಸ್ವಾಗತ, ಇಂದು ನಾವು Karnataka Yuva Nidhi Scheme ನ ಬಗ್ಗೆ ಅಂದರೆ Application Form, How to apply, Eligibility Criteria, Documents Required ರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಳ್ಳಿ.

 

ರಾಜ್ಯದಲ್ಲಿ 2022-2023 ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ವಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ) ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು. ಮಾತ್ರ) ರಂತೆ ನಿರುದ್ಯೋಗ ಭತ್ಯೆ ನೀಡುವ “ಯುವ ನಿಧಿ ಯೋಜನೆ” ಯನ್ನು ಜಾರಿಗೊಳಿಸಿದೆ.

 

Karnataka Yuva Nidhi Scheme Application Form

Karnataka Yuva Nidhi Scheme ನ ಉಪಯೋಗವನ್ನು 2023 ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪುತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪುತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು “Karnataka Yuva Nidhi Yojane” ಯನ್ನು ಕರ್ನಾಟಕ ಸರ್ಕಾರವು ಜಾರಿಗೊಳಿಸಿದೆ.

Yuva Nidhi Scheme Eligibility Criteria in Kannada

  • ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile
    of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
  • ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.
  • ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು,
  • ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

Those not eligible for this scheme

ಈ ಕೆಳಗೆ ನೀಡಲಾದ ಷರತ್ತುಗಳನ್ನು ನೀವು ಹೊಂದಿದ್ದರೆ ಈ ಯೋಜನೆಯ ಉಪಯೋಗ ಪಡೆಯಲು ಸಾಧ್ಯವೇ ಇಲ್ಲ

  • ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.
    2, ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.
  • ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
  • ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

Documents Required For Karnataka Yuva Nidhi

☞ಪದವಿ ಪ್ರಮಾಣಪತ್ರ / ಡಿಪ್ಲೊಮಾ ಪ್ರಮಾಣಪತ್ರ
☞ಅಭ್ಯರ್ಥಿಯ ಆಧಾರ್ ಕಾರ್ಡ್
☞ಬ್ಯಾಂಕ್ ಪಾಸ್ಬುಕ್
☞ಅಭ್ಯರ್ಥಿಯ ಫೋಟೋ
☞ಜಾತಿ ಮತ್ತು ಆದಾಯ ಪ್ರಮಾಣ ಪತ್ರ
☞ನಿವಾಸ ಪ್ರಮಾಣಪತ್ರ
☞ಮತ್ತು ಇತರೆ ದಾಖಲಾತಿಗಳು

Important Date:

Karnataka Yuva Nidhi scheme Apply Online Date: Updating Soon

Online Application Form Last Date : Updating Soon

Karnataka Yuva Nidhi Scheme
Karnataka Yuva Nidhi Scheme

How to Apply Online for Yuva Nidhi scheme in Karnataka

ಕೆಲವು ಮೂಲಗಳ ಪ್ರಕಾರ ಆನ್ ಲೈನ್ ಅರ್ಜಿ ಸಲ್ಲಿಸಲು Seva Sindhu ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗುತ್ತದೆ. ಈ ಕೆಳಗಿನ ಹಂತಗಳನ್ನೂ ಅನುಸರಿಸಿ ಅರ್ಜಿ ಸಲ್ಲಿಸಬಹುದಾಗಿದೆ.

  1. ಮೊದಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ (sevasindhuservices.karnataka.gov.in) ಗೆ ಭೇಟಿ ನೀಡಬೇಕಾಗುತ್ತದೆ.
  2. ನಂತರ ನಿಮ್ಮ ಮೊಬೈಲ್ ನಂಬರ್ ಮುಖಾಂತರ ಲಾಗಿನ್ ಆಗಿರಿ
  3. ಮೊತ್ತೊಂದು ಪುಟ ನಿಮ್ಮ ಮುಂದೆ ಬರುತ್ತೆ, ಈವಾಗ ನಿಮ್ಮ ಎಡ ಭಾಗದಲ್ಲಿ Menu ಮೇಲೆ ಕ್ಲಿಕ್ ಮಾಡಿ
  4. ನಂತರ Apply for Service ಮೇಲೆ ಕ್ಲಿಕ್ ಮಾಡಿ
  5. ನಿಮ್ಮ ಬಲಭಾಗದಲ್ಲಿ ಇರುವ Search ಬಾರ್ ನಲ್ಲಿ “Yuva Nidhi scheme Apply Online” ಅಂತ ಸರ್ಚ್ ಮಾಡಿ. ಬರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
  6. ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅಗತ್ಯವಿರುವ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  7. ಕೊನೆಗೆ Submit ಬಟನ್ ಮೇಲೆ ಕ್ಲಿಕ್ ಮಾಡಿ
  8. ನಂತರ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ

ಪ್ರಮುಖ ಲಿಂಕ್‌ಗಳು:

 

Yuva Nidhi Application Form/ Apply Online : Updating Soon

Official Website: karnataka.gov.in

More Information : KarnatakaHelp.in

 

ಅಂತಿಮ ನುಡಿ : ನಾವು ನೀಡಿದ ಮಾಹಿತಿಯು ನಿಮಗೆ ಉಪಯೋಗವಾಗಿದೆ ಎಂದು ನಾವು ಭಾವಿಸಿದ್ದೇವೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮುಖಾಂತರ ತಿಳಿಸಬಹುದಾಗಿದೆ . ಧನ್ಯವಾದಗಳು

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: