ಗೃಹಜ್ಯೋತಿ ಅರ್ಜಿ : ಉಚಿತ ವಿದ್ಯುತ್ ಗೆ ಸಲ್ಲಿಸಿದ ಅರ್ಜಿ ಸ್ಟೇಟಸ್ ಚೆಕ್ ಮಾಡುವ ವಿಧಾನ..! ತಪ್ಪದೇ ಈಗಲೇ ಸ್ಟೇಟಸ್ ಚೆಕ್ ಮಾಡಿ

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಿಮ್ಮ ಗ್ರಹ ಜ್ಯೋತಿ ಅರ್ಜಿಯ ಸ್ಥಿತಿಯನ್ನು ಯಾವ ರೀತಿ ಚೆಕ್ ಮಾಡಬೇಕು ಎನ್ನುವುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಿಕೊಡಲಾಗುತ್ತದೆ. ಒಂದು ವೇಳೆ ನಿಮ್ಮ ಅರ್ಜಿ Submit ಆಗಿರದೆ ಇದ್ದರೆ ಮತ್ತೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುದನ್ನು ಈಗ ತಿಳಿದುಕೊಳ್ಳೋಣ.
ಗೃಹಜ್ಯೋತಿ ಯೋಜನೆಗೆ ನೀವು ಈಗಾಗಲೇ ಅರ್ಜಿಯನ್ನು ಸಲ್ಲಿಸಿದ ಪ್ರತಿಯೊಬ್ಬ ಗ್ರಾಹಕರು ತಪ್ಪದೆ ತಮ್ಮ ತಮ್ಮ ಅರ್ಜಿಯ ಸ್ಥಿತಿಯನ್ನು (status) ಮಾಡಿಕೊಳ್ಳುವುದು ಕಡ್ಡಾಯ. ಅದಕ್ಕಾಗಿ ಕೆಳಗಿನ ಹಂತಗಳನ್ನು ಅನುಸರಿಸಿ.
ಗೃಹಜ್ಯೋತಿ ಯೋಜನೆಗೆ ಈಗಾಗಲೇ 90 ಲಕ್ಷ ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ. ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಉಚಿತ ವಿದ್ಯುತ್ ಸೌಲಭ್ಯ ಬೇಕು ಎಂದರೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಯಾರು ಅರ್ಜಿ ಸಲ್ಲಿಕೆ ಮಾಡಿರುವುದಿಲ್ಲವೋ ಅವರಿಗೆ ಆಗಸ್ಟ್‌ನಲ್ಲಿ ಪೂರ್ಣ ಬಿಲ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಆಗಸ್ಟ್ ತಿಂಗಳಿನಿಂದಲೇ ನಿನ್ನ ಮನೆಯ ವಿದ್ಯುತ್ ಬಿಲ್ ಶೂನ್ಯ ಬರಬೇಕೆಂದರೆ ಜುಲೈ 25ರ ಒಳಗೆ ನೀವು ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ನಿಗದಿಪಡಿಸದಿದ್ದರೂ ಕೂಡ ಶೀಘ್ರವಾಗಿ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿದೆ ಏಕೆಂದರೆ, ನೀವು ಎಷ್ಟು ಬೇಗ ಅರ್ಜಿಯನ್ನು ಸಲ್ಲಿಸುತ್ತಿರೋ, ಅಷ್ಟು ಬೇಗನೆ ನೀವು ಈ ಯೋಜನೆಯ ಫಲಾನುಭವಿಗಳಾಗುತ್ತೀರಾ. ಜೂನ್ 25ರೊಳಗೆ ಅರ್ಜಿಯನ್ನು ಸಲ್ಲಿಸಿರುವ ಎಲ್ಲಾ ಜನರಿಗೆ ಜುಲೈ ಒಂದರಿಂದ ಶೂನ್ಯ ವಿದ್ಯುತ್ ಬಿಲ್ ದೊರೆಯುತ್ತದೆ. ಹಾಗಾಗಿ ಇನ್ನೂ ನೀವೇನಾದರೂ ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಲ್ಲದಿದ್ದರೆ, ತಕ್ಷಣವೇ ಅರ್ಜಿಯನ್ನು ಸಲ್ಲಿಸಿ.
ಗೃಹ ಜ್ಯೋತಿ ಅರ್ಜಿ ಸ್ಥಿತಿಯನ್ನು ತಿಳಿದುಕೊಳ್ಳುವ ವಿಧಾನ :
ಹಂತ 1 : ಮೊದಲನೆಯದಾಗಿ ಈ ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://sevasindhugs.karnataka.gov.in/
ಹಂತ 2: ಮೇಲೆ ಕಾಣಿಸುತ್ತಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. ” ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ” ಆಪ್ಷನ್ ಸೆಲೆಕ್ಟ್ ಮಾಡಿಕೊಳ್ಳಿ
ಹಂತ 3: ನಂತರ ನಿಮ್ಮ ESCOM select ಮಾಡಿ,ನಿಮ್ಮ ವಿದ್ಯುತ್ ಬಿಲ್ ನ Account ID type ಮಾಡಿ,Check status ಮೇಲೆ ಕ್ಲಿಕ್ ಮಾಡಿ.
ಹಂತ 4: ಈ ಕೆಳಗಿನಂತೆ “Your application for Gruhajyothi scheme is received and sent to ESCOM for processing” ಎಂದು ತೋರಿಸಿದರೆ,ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆಯಾಗಿದೆ ಎಂದು ಅರ್ಥ
ಈ ರೀತಿಯಾಗಿ ತೋರಿಸದಿದ್ದರೆ, ಮತ್ತೊಂದು ಬಾರಿ ಅರ್ಜಿ ಸಲ್ಲಿಸಿ
ಮತ್ತೊಮ್ಮೆ ಅರ್ಜಿ ಸಲ್ಲಿಸುವುದು ಹೇಗೆ?
ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:
ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/ ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs.karnataka.gov.in/
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಗೃಹಜೋತಿ ಆಯ್ಕೆ ಮಾಡಿಕೊಂಡು. ಮೇಲೆ ಕೊಟ್ಟಿರುವ ಡಿಕ್ಲರೇಷನ್ ಸರಿಯಾಗಿ ಓದಿ ಚೆಕ್ ಬಾಕ್ಸ್ ಸೆಲೆಕ್ಟ್ ಮಾಡಿ ಕೊಟ್ಟಿರುವ ಕ್ಯಾಪ್ಚವನ್ನು ಸರಿಯಾಗಿ ನಮೂದಿಸಿ ಅಗ್ರಿ ಮೇಲೆ ಕ್ಲಿಕ್ ಮಾಡಿ
ಹಂತ 3: ಎಲ್ಲಾ ಸರಿಯಾದ ಮಾಹಿತಿಯನ್ನ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
ಹಂತ 3: ಎಸ್ಕಾಂ ಹೆಸರು, ಖಾತೆ ಸಂಖ್ಯೆ, ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ, ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ, ಎಸ್ಕಾಂ ಹೆಸರು1, ಬಳಕೆದಾರರ ವಿಧ (ಇಲ್ಲಿ 3 ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು/ ಕುಟುಂಬದ ಸದಸ್ಯರು) ಎಂದಿದೆ, ಆಧಾರ್ ಸಂಖ್ಯೆ, ಅರ್ಜಿದಾರರ ಹೆಸರು, ಸಂವಹನಕ್ಕಾಗಿ ದೂರವಾಣಿ ಸಂಖ್ಯೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ.
ಹಂತ 4: ನಂತರ ಕೆಳಗಡೆ ಈ ರೀತಿಯಾಗಿ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ
ನಿಮಗೆ ಮೊಬೈಲ್ ನಲ್ಲಿ ಅಪ್ಲಿಕೇಶನ್ ಹಾಕುವಾಗ ಏನಾದ್ರು ಸಮಸ್ಯೆ ಆದರೆ ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು
ಸೂಚನೆ: ಇಂದು ಬಹಳ ಜನ ಗೃಹಜೋತಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಹಾಗಾಗಿ ತಾಂತ್ರಿಕ ಕಾರಣಗಳಿಂದ ವೆಬ್ಸೈಟ್ ತೆರೆಯದಿದ್ದರೆ ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಿ, ಅರ್ಜಿ ಸಲ್ಲಿಸಿ
ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.