ಗೃಹ ಲಕ್ಷ್ಮಿ ಯೋಜನೆ :ಮೂರು ದಿನಗಳಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾಹಿತಿ ಕೊಡುತ್ತೇನೆ ಹೆಬ್ಬಾಳ್ಕರ್

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆ ಬಹಳ ಮುಂದೆ ಬಂದಿದೆ. ಮೂರು ದಿನಗಳಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾಹಿತಿ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಗೆ ಪಡಿತರ ಕಾರ್ಡ್ ಕಡ್ಡಾಯ. ಯೋಜನೆಗೆ ಅರ್ಜಿ ಹಾಕಿದ ಬಳಿಕ ಸ್ವೀಕೃತಿ ಆದಾಗ ವಾಯ್ಸ್ ಮೆಸೇಜ್ ಬರುತ್ತದೆ. ಪ್ರತಿ ತಿಂಗಳು ಹಣ ಜಮೆ ಆದಾಗಲಾ ಮೆಸೇಜ್ ಬರುತ್ತದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ವಿಚಾರವಾಗಿ ಪ್ರತಿಕ್ರಿಯಿಸಿ, ಉಡುಪಿ ಜಿಲ್ಲೆಗೆ ನಾಳೆ ಸಾಯಂಕಾಲ ಹೋಗುತ್ತೇನೆ. ಅಧಿಕಾರಿಗಳ ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಎರಡು ಸಾವು ಸಂಭವಿಸಿದೆ. ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ಕೊಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.
ಆಗಸ್ಟ್ 25ರಿಂದ ಅರ್ಜಿ ಸಲ್ಲಿಕೆ ಶುರು? : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಕಾರ್ಯ ಆಗಸ್ಟ್ 25ರಿಂದ ಪ್ರಾರಂಭವಾಗಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ರಾಜ್ಯದ 1.27 ಕೋಟಿ ಕುಟುಂಬಗಳ ಒಡತಿಯರಿಗೆ ಈ ಸೌಲಭ್ಯ ದೊರೆಯಲಿದ್ದು, ಇದಕ್ಕಾಗಿ ಸರ್ಕಾರ ಅಂದಾಜು 30 ಸಾವಿರ ಕೋಟಿ ರೂ.ಗಳನ್ನು ಭರಿಸಲಿದೆ ಎಂದು ತಿಳಿದುಬಂದಿದೆ.