EducationKarnataka News
ಇಂದಿನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಲಿದೆ.ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆ. 18ರಂದು ಅಧಿಕೃತವಾಗಿ ಶಾಲೆಯೊಂದರಲ್ಲಿ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಗುತ್ತದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.