Karnataka NewsScience

BREAKING NEWS : ಕಲಬುರಗಿ, ವಿಜಯಪುರದಲ್ಲಿ ತಡರಾತ್ರಿ ಭೂಕಂಪದ ಅನುಭವ

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಕಳೆದ ರಾತ್ರಿ 1 ಗಂಟೆ ಸಮಯದಲ್ಲಿ ಭೂಕಂಪನದ ಅನುಭವವಾಗಿದೆ. ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರ ಬಂದಿದ್ದಾರೆ.

 

ಗಡಿಕೇಶ್ವರ ಗ್ರಾಮದಲ್ಲಿ ಅನೇಕ ತಿಂಗಳಿಂದ ಭೂಮಿಯಿಂದ ಭಾರೀ ಸದ್ದು ಬರುತ್ತಿತ್ತು. ಇದೀಗ ತಡರಾತ್ರಿ 1 ಗಂಟೆ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

 

ವಿಜಯಪುರ ನಗರದ ಹಲವೆಡೆ ತಡರಾತ್ರಿ 12.20 ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವಾಗಿದೆ. ವಿಜಯಪುರ ನಗರದ ರೈಲ್ವೇ ಸ್ಟೇಷನ್ ಪ್ರದೇಶ, ಅಲ್ಲಾಪುರ ಓಣಿ, ಶಿವಗಿರಿ, ಅಲ್ಲಾಪುರ ತಾಂಡಾ, ಗೋಳಗುಮ್ಮಟ ಸೇರಿ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಭಯದಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

Back to top button
error: Content is protected !!
%d bloggers like this: