Crime News

ಬೆಳಗಾವಿ ನಗರದಲ್ಲಿ ಮನೆಗಳ್ಳರ ಹೆಡೆಮುರಿಕಟ್ಟಿದ ಇನ್ಸ್‍ಪೆಕ್ಟರ್ ಸುನೀಲ್ ಪಾಟೀಲ್

ಬೆಳಗಾವಿ ಶಹರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮರ ಹೆಡೆಮುರಿಕಟ್ಟುವಲ್ಲಿ ಮಾಳಮಾರುತಿ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಸುನೀಲ್ ಪಾಟೀಲ್ ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಾಳಮಾರುತಿ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಸುನೀಲ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟಿ 2,24,200 ರೂ ಮೌಲ್ಯದ ಕೆನಾನ್ ಕ್ಯಾಮರಾ, ಮೂರು ಜೊತೆ ಆದಿದಾಸ್ ಕಂಪನಿಯ ಶೂ, ಟೈಟನ್ ಕಂಪನಿಯ ಕೈಗಡಿಯಾರ, ಹೇರ್ ವ್ಯಾಕ್ಸ್ ಹಾಗೂ ಫರ್‍ಫ್ಯೂಮ್ ಮೊದಲಾದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣಾ ಪಿಎಸ್‍ಐ ಹೊನ್ನಪ್ಪ ತಳವಾರ್, ಎಎಸ್‍ಐ ಎಬಿ ಕುಂಡೇದ್, ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಇವರ ಕಾರ್ಯಕ್ಕೆ ಪೊಲೀಸ್ ಆಯುಕ್ತರು,ಹಾಗೂ ಉಪ ಪೊಲೀಸ್ ಆಯುಕ್ತರು, ಮೆಚ್ಚುಗೆ ವ್ಯಕ್ತಪಡಿಸಿ ನಗದು ಬಹುಮಾನ ಘೋಶಿಸಿದ್ದಾರೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

Back to top button
error: Content is protected !!
%d bloggers like this: