Karnataka NewsPolitics

ಚುನಾವಣೆಗೆ ವೀಕ್ಷಕಿ ಏಕರೂಪ್ ಕೌರ್ ಸೂಚನೆ, ಮತಗಟ್ಟೆಗಳ ಪರಿಶೀಲನೆ

ಬೆಳಗಾವಿ: ‘ವಿಧಾನಪರಿಷತ್ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು’ ಎಂದು ವಿಧಾನಪರಿಷತ್ ಚುನಾವಣೆ ಜಿಲ್ಲೆಯ ವೀಕ್ಷಕಿ, ಐ.ಎ.ಎಸ್. ಅಧಿಕಾರಿ ಏಕರೂಪ್ ಕೌರ್ ಸೂಚಿಸಿದರು.

 

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪರಿಷತ್ ಚುನಾವಣೆಯಲ್ಲಿ ಪ್ರಾಶಸ್ತ್ಯ ಮತಗಳಿರುವುದರಿಂದ ಮತ ಎಣಿಕೆ ವಿಭಿನ್ನವಾಗಿರುತ್ತದೆ. ಆದ್ದರಿಂದ ಎಣಿಕೆಗೆ ಅನುಭವಿ ಅಧಿಕಾರಿಗಳನ್ನು ನಿಯೋಜಿಸಬೇಕು’ ಎಂದು ತಿಳಿಸಿದರು.

ಸೌಕರ್ಯ ಒದಗಿಸಲು ಕ್ರಮ:

‘ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು’ ಎಂದು ತಿಳಿಸಿದರು.

ಮಾದರಿ ನೀತಿಸಂಹಿತೆ, ತರಬೇತಿ, ಮೈಕ್ರೋ ಅಬ್ಸರ್ವರ್‌ಗಳ ನಿಯೋಜನೆ, ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನೋಡಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಚುನಾವಣಾ ಸಿದ್ಧತೆಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶಕುಮಾರ್ ಮಾಹಿತಿ ನೀಡಿದರು. ‘ಜಿಲ್ಲೆಯಲ್ಲಿ ಒಟ್ಟಾರೆ 511 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮಾರ್ಗಸೂಚಿ ಪ್ರಕಾರ ಎಲ್ಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರತಿ ಮತಗಟ್ಟೆಗೆ ಒಬ್ಬ ಮೈಕ್ರೋಅಬ್ಸರ್ವರ್‌ ನೇಮಿಸಲಾಗುವುದು’ ಎಂದು ತಿಳಿಸಿದರು.

ತರಬೇತಿ ನೋಡಲ್ ಅಧಿಕಾರಿ ಪ್ರೀತಂ ನಸಲಾಪುರೆ ಮಾತನಾಡಿದರು.

ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಜಿಲ್ಲಾ ಪಂಚಾಯಿತಿ ಸಿಇಒ ಎಚ್‌.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ‌ ಆಯುಕ್ತ ಡಾ.ರುದ್ರೇಶ್ ಘಾಳಿ, ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಎನ್.ಐ.ಸಿ. ಅಧಿಕಾರಿಗಳು ಮತ್ತು ಎಲ್ಲ ನೋಡಲ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ವೀಕ್ಷಕಿ ಏಕರೂಪ್ ಕೌರ್ ಅವರು ತಾಲ್ಲೂಕಿನ ಕಾಕತಿ ಹಾಗೂ ಕಡೋಲಿ ಗ್ರಾಮಗಳಿಗೆ ಭೇಟಿ ನೀಡಿ ಮತಗಟ್ಟೆಗಳನ್ನು ಪರಿಶೀಲಿಸಿದರು.

ಎರಡೂ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳನ್ನು ವೀಕ್ಷಿಸಿದರು. ಮಾರ್ಗಸೂಚಿ ಪ್ರಕಾರ ಮೂಲಸೌಕರ್ಯ ಒದಗಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ತರಬೇತಿ ‌ನೋಡಲ್ ಅಧಿಕಾರಿ ಪ್ರೀತಂ ನಸಲಾಪುರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೌರಿಶಂಕರ, ತಹಶೀಲ್ದಾರ್‌ ಆರ್‌.ಕೆ. ಕುಲಕರ್ಣಿ ಉಪಸ್ಥಿತರಿದ್ದರು.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

Back to top button
error: Content is protected !!
%d bloggers like this: