ವೀಕೆಂಡ್ ಕರ್ಫ್ಯೂ ತೆರವು ನೈಟ್ ಕರ್ಫ್ಯೂ ಮುಂದುವರಿಕೆ ಉಳಿದ ಎಲ್ಲ ನಿಯಮಗಳು ಮುಂದುವರಿಯುತ್ತದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿದ್ದು, ವೀಕೆಂಡ್ ಕರ್ಫ್ಯೂ ತೆರವು ಗೊಳಿಸುವ ತೀರ್ಮಾನ ಕೈಗೊಂಡಿದ್ದಾರೆ.
ಸಚಿವ ಆರ್ ಅಶೋಕ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ , ಎಲ್ಲಾ ತಜ್ಞರ ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ.
ವೀಕೆಂಡ್ ಕರ್ಫ್ಯೂ ತೆರವು ಗೊಳಿಸುವ ತೀರ್ಮಾನ ಕೈಗೊಂಡಿದ್ದು, ನೈಟ್ ಕರ್ಫ್ಯೂ ಮುಂದುವರಿಯಲಿದೆ, ಉಳಿದ ಎಲ್ಲ ನಿಯಮಗಳು ಮುಂದುವರಿಯುತ್ತದೆ ಎಂದು ತಿಳಿಸಿದರು.
ನಾಳೆಯಿಂದ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ತಿಳಿಸಿದರು. ಜನರು ಎಚ್ಚರಿಕೆ ವಹಿಸಬೇಕು, ಸೋಂಕಿನ ಸಂಖ್ಯೆ ಹೆಚ್ಚಾದಲ್ಲಿ ಮತ್ತೆ ಕಠಿಣ ಕ್ರಮ ಕೈಗೊಳ್ಳುವ ಅನಿವಾರ್ಯತೆ ಎದುರಾಗುತ್ತದೆ ಎಂದರು.
ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾದರೆ ಮತ್ತೆ ವೀಕ್ ಎಂಡ್ ಕರ್ಪ್ಯೂ ಜಾರಿ ತರುವ ಕಂಡಿಷನ್ ಮೇಲೆ ಕರ್ಪ್ಯೂ ಸಡಿಲಿಕೆ ಮಾಡಲಾಗಿದೆ.ನೈಟ್ ಕರ್ಪ್ಯೂ ರಾತ್ರಿ 10 ರಿಂದ ಬೆಳಗಿನ 5 ರ ವರೆಗೆ ವಾರದ ಏಳೂ ದಿನ ಮುಂದುವರಿಯಲಿದೆ. ಪ್ರತಿಭಟನೆ, ರ್ಯಾಲಿ, ಸಮಾರಂಭ, ಸಿನೆಮಾ, ಎಲ್ಲವೂ ಯಥಾ ಸ್ಥಿತಿ ಮುಂದುವರೆಯಲಿದೆ. ಕೊವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆ ಸೇರುವವರ ಸಂಖ್ಯೆ ಕಡಿಮೆ ಇದೆ. ಕೊವಿಡ್ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ . ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತೆರವು ಮಾಡಬೇಕೆಂಬ ಬೇಡಿಕೆ ಇಟ್ಟಿದ್ದರು ಆದರೆ, ಬೆಂಗಳೂರು ಬಿಟ್ಟು ಜನರು ಹಳ್ಳಿಗಳಿಗೆ ಹೋಗುತ್ತಾರೆ ಅಲ್ಲಿ ಹೆಚ್ಚಾಗುತ್ತದೆ ಆ ಕಾರಣಕ್ಕಾಗಿ ರಾಜ್ಯವನ್ನು ಒಂದು ಯುನಿಟ್ ಎಂದು ಪರಿಗಣಿಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ಜನರಿಗೆ ಜಾಗೃತಿ ಮೂಡಿಸಲು ನೈಟ್ ಕರ್ಪ್ಯೂ ಮುಂದುವರೆಸಲು ತೀರ್ಮಾನ ಮಾಡಲಾಗಿದ್ದು, 2.93,231 ಸಕ್ರೀಯ ಪ್ರಕರಣಗಲಿದ್ದು, 2.86 ಸಾವಿರ ಹೋಮ್ ಐಸೋಲೇಷನ್ ನಲ್ಲಿ ಇದ್ದಾರೆ. 5340 ಆಸ್ಪತ್ರೆಗೆ ದಾಖಲಾಗಿದ್ದಾರೆ. 340 ಮಂದಿ ಐಸಿಯು ನಲ್ಲಿದ್ದಾರೆ. ಪಾಸಿಟಿವ್ ದರ ಶೇ 19% ರಷ್ಟಿದೆ ಎಂದು ಮಾಹಿತಿ ನೀಡಿದರು.