Business News

LPG ಸಿಲಿಂಡರ್ ದರ ₹100 ಕಡಿತ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

WhatsApp Group Join Now
Telegram Group Join Now

ಬೆಂಗಳೂರು: ಎಲ್‌.ಪಿ.ಜಿ ಸಿಲಿಂಡರ್ ದರವನ್ನು ₹100 ಕಡಿತ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್ ತಾಣದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್‌.ಪಿ.ಜಿ ಸಿಲಿಂಡರ್ ಬೆಲೆಯನ್ನು ₹100 ಕಡಿತ ಮಾಡುತ್ತಿದೆ.

ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ’ ಎಂದು ಮೋದಿ ಬರೆದುಕೊಂಡಿದ್ದಾರೆ.

‘ಅಡುಗೆ ಅನಿಲವನ್ನು ಕೈಗೆಟುಕುವಂತೆ ಮಾಡುವ ಮೂಲಕ, ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ‘ಸುಲಭ ಬದುಕು’ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ’ ಎಂದು ಪ್ರಧಾನಿ ಹೇಳಿದ್ದಾರೆ.

WhatsApp Group Join Now
Telegram Group Join Now
Back to top button